ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ಟ್ರೇಲಿಯಾ | ಚಾಕುವಿನಿಂದ ವ್ಯಕ್ತಿಗೆ ಇರಿದಿದ್ದ ಬಾಲಕ ಪೊಲೀಸರ ಗುಂಡೇಟಿಗೆ ಬಲಿ

Published 5 ಮೇ 2024, 14:23 IST
Last Updated 5 ಮೇ 2024, 14:23 IST
ಅಕ್ಷರ ಗಾತ್ರ

ಮೆಲ್ಬರ್ನ್‌: ಆಸ್ಟ್ರೇಲಿಯಾದ ಪಶ್ಚಿಮ ಕರಾವಳಿ ನಗರ ಪೆರ್ತ್‌ನಲ್ಲಿ ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ ಇರಿದಿದ್ದ 16 ವರ್ಷದ ಬಾಲಕ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದರು.

ವೆಲ್ಲಿಂಗ್ಟನ್‌ನಲ್ಲಿರುವ ಹಾರ್ಡ್‌ವೇರ್‌ ಅಂಗಡಿಯ ವಾಹನ ನಿಲುಗಡೆ ಸ್ಥಳದಲ್ಲಿ ಶನಿವಾರ ರಾತ್ರಿ ಈ ಘಟನೆ ನಡೆದಿದೆ.

ಗಾಯಾಳು ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಧಾನಮಂತ್ರಿ ಆಂಥೋನಿ ಅಲ್ಬನೀಸ್, ‘ನಮ್ಮದು ಶಾಂತಿ ಪ್ರಿಯ ರಾಷ್ಟ್ರ. ಇಲ್ಲಿ ಹಿಂಸಾಚಾರಕ್ಕೆ ಅವಕಾಶವಿಲ್ಲ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT