ಸೋಮವಾರ, 25 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹವಾಯಿ ಕಾಳ್ಗಿಚ್ಚು: ಮೃತರ ಸಂಖ್ಯೆ 55ಕ್ಕೆ ಏರಿಕೆ

Published 11 ಆಗಸ್ಟ್ 2023, 14:19 IST
Last Updated 11 ಆಗಸ್ಟ್ 2023, 14:19 IST
ಅಕ್ಷರ ಗಾತ್ರ

ಲಾಯಿನಾ (ಅಮೆರಿಕ): ಕಾಳ್ಗಿಚ್ಚು ವ್ಯಾಪಿಸಿದ್ದರಿಂದ ಇಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 55ಕ್ಕೆ ಏರಿಕೆಯಾಗಿದೆ ಎಂದು ಮಾಯು ಕೌಂಟಿ  ಗುರುವಾರ ರಾತ್ರಿ ಪ್ರಕಟಣೆಯಲ್ಲಿ ತಿಳಿಸಿದೆ.

ಐತಿಹಾಸಿನ ನಗರ ಲಾಯಿನಾವು ಅಗ್ನಿಯ ಕೆನ್ನಾಲಿಗೆಗೆ ಸಿಲುಕಿದ್ದು, ಬೆಂಕಿ ನಂದಿಸುವ ಕಾರ್ಯ ಪ್ರಗತಿಯಲ್ಲಿದೆ. ಇಲ್ಲಿ ಮೃತಪಟ್ಟವರ ಗುರುತು ಪತ್ತೆಗೆ ಯತ್ನಿಸಲಾಗುತ್ತಿದೆ ಎಂದು ಮೇಯರ್‌ ರಿಚರ್ಡ್‌ ಬಿಸ್ಸೆನ್‌ ತಿಳಿಸಿದ್ದಾರೆ.

ಕ್ಯಾಲಿಫೋರ್ನಿಯಾ ಮತ್ತು ವಾಷಿಂಗ್ಟನ್‌ನಿಂದ ರಕ್ಷಣಾ ಕಾರ್ಯಚರಣೆಗೆ ಸಿಬ್ಬಂದಿ ಆಗಮಿಸಿದ್ದಾರೆ. ಶ್ವಾನಗಳನ್ನು ಬಳಸಿ ಮೃತದೇಹಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರಣವೇನು?: ಕಾಳ್ಗಿಚ್ಚಿನ ಜ್ವಾಲೆ ಮತ್ತು ಡೋರ ಚಂಡಮಾರುತ ದಕ್ಷಿಣದೆಡೆಗೆ ಬಿರುಸಾಗಿ ಸಾಗಿ ಮಾಯು ಮತ್ತು ಹವಾಯಿ ದ್ವೀಪವನ್ನು ಆವರಿಸಿದ್ದರಿಂದ ಅವಘಡ ಸಂಭವಿಸಿದೆ.  ಇದರಿಂದಾಗಿ ಹಲವರು ಗಾಯಗೊಂಡಿದ್ದು, ಸಾವಿರಾರು ಮನೆಗಳು, ವಾಣಿಜ್ಯ ಕಟ್ಟಡಗಳು, ಕಾರುಗಳು ಸುಟ್ಟು ಕರಕಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT