ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಲೂಚಿಸ್ತಾನ: ಉಗ್ರರ ದಾಳಿಗೆ 11 ಬಲಿ

Published 21 ಏಪ್ರಿಲ್ 2024, 13:48 IST
Last Updated 21 ಏಪ್ರಿಲ್ 2024, 13:48 IST
ಅಕ್ಷರ ಗಾತ್ರ

ಕರಾಚಿ: ಪ್ರಕ್ಷುಬ್ಧ ಗೊಂಡಿರುವ ಬಲೂಚಿಸ್ತಾನ ದಲ್ಲಿ ಉಗ್ರರು ನಡೆಸಿದ ಎರಡು ಪ್ರತ್ಯೇಕ ದಾಳಿಗಳಲ್ಲಿ 11 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.


ರಾಷ್ಟ್ರೀಯ ಹೆದ್ದಾರಿ ಯಲ್ಲಿ ಕ್ವೆಟ್ಟಾದಿಂದ ತಫ್ತಾನ್‌ಗೆ ಚಲಿಸುತ್ತಿದ್ದ ಬಸ್‌ ತಡೆದ ಶಸ್ತ್ರಸಜ್ಜಿತ ಉಗ್ರರು, ಅದರೊಳಗಿದ್ದ ಒಂಬತ್ತು ಪ್ರಯಾಣಿಕರನ್ನು ಪರ್ವತ ಪ್ರದೇಶಕ್ಕೆ ಕರೆದೊಯ್ದು ಗುಂಡಿಕ್ಕಿ ಕೊಂದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.


ಇದೇ ಹೆದ್ದಾರಿಯಲ್ಲಿ ಉಗ್ರರು ಮತ್ತೊಂದು ದಾಳಿ ನಡೆಸಿದ್ದು, ಚಲಿಸುತ್ತಿದ್ದ ಕಾರಿನ ಮೇಲೆ ಗುಂಡಿನ ಸುರಿಮಳೆಗರೆದು ಇಬ್ಬರನ್ನು ಕೊಂದಿದ್ದಾರೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ.

ಉಗ್ರ ರಬ್ಬಾನಿ ಹತ್ಯೆ (ಪೇಶಾವರ ವರದಿ): ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಪಾಕಿಸ್ತಾನ ಸೇನೆಯು ಶನಿವಾರ ನಡೆಸಿದ ಕಾರ್ಯಾಚರಣೆಯಲ್ಲಿ ಉಗ್ರ ಸಂಘಟನೆಯ ಮುಖಂಡ ಸಲೀಂ ಅಲಿಯಾಸ್‌ ರಬ್ಬಾನಿ ಸೇರಿದಂತೆ ಇಬ್ಬರು ಉಗ್ರರನ್ನು ಕೊಲ್ಲಲಾಗಿದೆ. ಮತ್ತಿಬ್ಬರು ಉಗ್ರರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಂಡಿನ ಚಕಮಕಿ ಯಲ್ಲಿ ಇಬ್ಬರು ಸೈನಿಕರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT