ಪೇಶಾವರ: ಪಾಕಿಸ್ತಾನದ ನೈಋತ್ಯ ಪ್ರಾಂತ್ಯ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಫೋಟದಲ್ಲಿ ಕನಿಷ್ಠ 24 ಮಂದಿ ಮೃತಪಟ್ಟಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ‘ಎಎಫ್ಪಿ’ ವರದಿ ಮಾಡಿದೆ.

ಭಾನುವಾರ ಬೆಳಿಗ್ಗೆ ರಾಜಧಾನಿ ಕ್ವೆಟ್ಟಾದಲ್ಲಿ ದಾಳಿ ನಡೆದಿದ್ದು, ಮೃತರಲ್ಲಿ ಸೇನಾ ಸಿಬ್ಬಂದಿಯೂ ಸೇರಿದ್ದಾರೆ. 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿ ‘ಎಎಫ್ಪಿ’ಗೆ ಮಾಹಿತಿ ನೀಡಿದ್ದಾರೆ.
.ಬಲೂಚಿಸ್ತಾನ: 40 ತಾಸು ಕಾರ್ಯಾಚರಣೆ; 145 ಉಗ್ರರು, 17 ಭದ್ರತಾ ಸಿಬ್ಬಂದಿ ಹತ್ಯೆ.
ಕ್ವೆಟ್ಟಾದ ಚಮನ್ ಪಟ್ಟಾಕ್ನಲ್ಲಿ ರೈಲು ಸಿಗ್ನಲ್ ದಾಟುತ್ತಿದ್ದಾಗ ಸ್ಫೋಟಕ ತುಂಬಿದ ಕಾರೊಂದುರೈಲಿನ ಬೋಗಿಗಳಿಗೆ ಡಿಕ್ಕಿ ಹೊಡೆದಿದ್ದರಿಂದ ಪರಿಣಾಮ ಭಾರಿ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಸ್ಫೋಟದಿಂದಾಗಿ ರೈಲಿಗೆ ಭಾಗಶಃ ಹಾನಿಯಾಗಿದ್ದು, ಆ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ 10 ವಾಹನಗಳಿಗೂ ಹಾನಿಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸ್ಫೋಟದ ತೀವ್ರತೆಗೆ ಸಮೀಪದ ಕಟ್ಟಡಗಳ ಕಿಟಕಿಗಳು ಮತ್ತು ಗಾಜುಗಳು ಪುಡಿಯಾಗಿವೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ. ರೈಲಿನ ಬೋಗಿಯೊಂದು ನಜ್ಜುಗುಜ್ಜಾಗಿದ್ದು, ಅವಶೇಷಗಳ ನಡುವೆ ಬದುಕುಳಿದವರನ್ನು ಹುಡುಕುತ್ತಿರುವ ದೃಶ್ಯವನ್ನು ಸುದ್ದಿ ಸಂಸ್ಥೆಗಳು ಪ್ರಸಾರ ಮಾಡಿವೆ.

ಸೇನಾ ಅಧಿಕಾರಿಗಳು ಮತ್ತು ಅವರ ಕುಟುಂಬ ಸದಸ್ಯರು ರೈಲಿನಲ್ಲಿ ಇದ್ದರು ಎಂದು ಎಂದು ಅಧಿಕಾರಿ ಎಎಫ್ಪಿಗೆ ತಿಳಿಸಿದ್ದಾರೆ. ಮಂಗಳವಾರದಿಂದ ಪ್ರಾರಂಭವಾಗಲಿರುವ ಈದ್ ಹಬ್ಬವನ್ನು ಆಚರಿಸಲು ಈ ಸಿಬ್ಬಂದಿ ಪ್ರಯಾಣಿಸುತ್ತಿದ್ದರು ಎಂದು ಮತ್ತೊಬ್ಬ ಅಧಿಕಾರಿ ಹೇಳಿದ್ದಾರೆ.
.ಬಲೂಚಿಸ್ತಾನ: ಜಾಫರ್ ಎಕ್ಸ್ಪ್ರೆಸ್ ಮೇಲೆ ದಾಳಿ.
ಘಟನೆಯ ನಂತರ ಕ್ವೆಟ್ಟಾ ಪ್ರದೇಶದಾದ್ಯಂತದ ಸರ್ಕಾರಿ ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದ್ದು, ಪರಿಸ್ಥಿತಿಯನ್ನು ನಿಭಾಯಿಸಲು ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಯನ್ನು ಕರೆಸಿಕೊಳ್ಳಲಾಗಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಪೇಶಾವರಕ್ಕೆ ತೆರಳುತ್ತಿದ್ದ ಜಾಫರ್ ಎಕ್ಸ್ಪ್ರೆಸ್ ರೈಲನ್ನು ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ನಿಲ್ಲಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾಗಿ ಪಿಟಿಐ ವರದಿ ಮಾಡಿದೆ.

ಸ್ಫೋಟ ಸಂಭವಿಸಿದ ಬೆನ್ನಲ್ಲೇ ಸಂಬಂಧಪಟ್ಟ ಎಲ್ಲಾ ಸಂಸ್ಥೆಗಳನ್ನು ಹೈ ಅಲರ್ಟ್ನಲ್ಲಿ ಇಡಲಾಗಿದೆ ಎಂದು ಗೃಹ ಸಚಿವರ ವಕ್ತಾರ ಬಾಬರ್ ಯೂಸುಫ್ಜಾಯಿ ಮಾಹಿತಿ ನೀಡಿದ್ದಾರೆ.

(ವಿವಿಧ ಏಜೆನ್ಸಿಗಳ ಮಾಹಿತಿ ಆಧರಿಸಿ ಬರೆದ ಸುದ್ದಿ)
.Republic of Balochistan | ಪಾಕ್ ಪತನ ಶೀಘ್ರ, ಬಲೂಚಿಸ್ತಾನ ಉದಯ: ಮೀರ್ ಯಾರ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.