ಢಾಕಾ: ಬಾಂಗ್ಲಾದೇಶದಲ್ಲಿ ಕುಷ್ಟಿಯಾ ಮತ್ತು ರಂಗಪುರ ಜಿಲ್ಲೆಗಳಲ್ಲಿ ಶನಿವಾರ ನಡೆದ ಎರಡು ಪ್ರತ್ಯೇಕ ದಾಳಿಗಳಲ್ಲಿ ಇಬ್ಬರು ಮುಸ್ಲಿಂ ಯುವಕರನ್ನು ಹತ್ಯೆ ಮಾಡಲಾಗಿದೆ.

ಇದೇ ವೇಳೆ ಪ್ರತಿಭಟನಾಕಾರರು ಹಿಂದೂಗಳ ಮಾಲೀಕತ್ವದ ಮನೆ ಹಾಗೂ ಅಂಗಡಿಗಳನ್ನು ಧ್ವಂಸಗೊಳಿಸಲಾಗಿದೆ. ಹತ್ಯೆ ಘಟನೆಗೂ ಮತ್ತು ಹಿಂದೂಗಳಿಗೂ ಯಾವುದೇ ಸಂಬಂಧ ಇಲ್ಲದಿದ್ದರೂ ದಾಳಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಗಮನವನ್ನು ಬೇರೆಡೆಗೆ ಸೆಳೆಯಲು ಕಿಡಿಗೇಡಿಗಳು ಈ ದಾಂಧಲೆ ನಡೆಸಿದ್ದಾರೆ ಎಂದು ಪೊಲೀಸರು ಖಚಿತಪಡಿಸಿದ್ದು ಘಟನೆ ಸಂಬಂಧ ಹಲವರನ್ನು ಬಂಧಿಸಿದ್ದು ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಕುಷ್ಟಿಯಾ ಜಿಲ್ಲೆಯಲ್ಲಿ ಇಸ್ಲಾಂ ಧರ್ಮಕ್ಕೆ ಅವಮಾನ ಮಾಡಿದ ಆರೋಪದ ಮೇಲೆ ಇಸ್ಲಾಂ ಧರ್ಮಗುರುವನ್ನು ಗುಂಪು ಹತ್ಯೆ ಮಾಡಲಾಗಿದೆ. ಹಾಗೂ ರಂಗಪುರದಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ರಾಕೀಬ್ ಹಸನ್ ಎಂಬ ಯುವಕನನ್ನು ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಗುಂಪು ಹತ್ಯೆ ಮಾಡಲಾಗಿದೆ.

ಈ ವೇಳೆ ನಡೆದ ಪ್ರತಿಭಟೆ ಸಮಯದಲ್ಲಿ ಎರಡು ಕಡೆಗಳಲ್ಲಿ ಹಿಂದೂಗಳ ಮನೆ ಹಾಗೂ ಅಂಗಡಿಗಳ ಮೇಲೆ ದಾಳಿ ಮಾಡಿ ದಾಂಧಲೆ ನಡೆಸಲಾಗಿದೆ.

ಬಾಂಗ್ಲಾದೇಶದಲ್ಲಿ ಹಿಂದೂ ಬೌದ್ಧ ಕ್ರಿಶ್ಚಿಯನ್ ಐಕ್ಯತಾ ಪರಿಷತ್ತಿನ ಪ್ರಕಾರ, ಈ ವರ್ಷದ ಜನವರಿ 1ರಿಂದ ಮಾರ್ಚ್ 31ರ ನಡುವೆ ದೇಶದಲ್ಲಿ ಒಟ್ಟು 133 ಕೋಮು ಹಿಂಸಾಚಾರದ ಘಟನೆಗಳು ವರದಿಯಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.