ಢಾಕಾ/ನವದೆಹಲಿ: ಆರೋಪ ಎದುರಿಸುತ್ತಿರುವ ಸಂಘಟನೆ ಮತ್ತು ವ್ಯಕ್ತಿಯ ಹೇಳಿಕೆ, ಅವರಿಗೆ ಸಂಬಂಧಿಸಿದ ಯಾವುದೇ ವಿಷಯದ ಕುರಿತು ಪ್ರಸಾರ ಮಾಡುವುದನ್ನು ಪರಿಷ್ಕೃತ ಭಯೋತ್ಪಾದನಾ ನಿಗ್ರಹ ಕಾಯ್ದೆ ಅಡಿಯಲ್ಲಿ ಬಾಂಗ್ಲಾದೇಶವು ನಿಷೇಧಿಸಿದೆ.

ಅಂತಹ ಸಂಘಟನೆ ಹಾಗೂ ವ್ಯಕ್ತಿಗೆ ಬೆಂಬಲ ನೀಡುವ ಪತ್ರಿಕಾ ಹೇಳಿಕೆಗಳು, ಸಾಮಾಜಿಕ ಜಾಲತಾಣಗಳಲ್ಲಿ ವಿಷಯಗಳನ್ನು ಹಂಚಿಕೊಳ್ಳುವುದು ಹಾಗೂ ಸಾರ್ವಜನಿಕ ಸಭೆಗಳನ್ನು ಈ ಕಾಯ್ದೆಯು ನಿಷೇಧಿಸುತ್ತದೆ.

ಪದಚ್ಯುತ ಪ್ರಧಾನಿ ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್ ಪಕ್ಷವನ್ನು ನಿಷೇಧಿಸಿದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ.

ರಾಷ್ಟ್ರಪತಿ ಮೊಹಮ್ಮದ್ ಶಹಾಬುದ್ದೀನ್ ಅವರು ಭಯೋತ್ಪಾದನಾ ನಿಗ್ರಹ ಕಾಯ್ದೆಗೆ ತಿದ್ದುಪಡಿ ತರುವ ಸುಗ್ರೀವಾಜ್ಞೆಯನ್ನು ಭಾನುವಾರ ರಾತ್ರಿ ಹೊರಡಿಸಿದರು.

ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನುಸ್ ನೇತೃತ್ವದ ಸಚಿವ ಸಂಪುಟವು 2009ರ ಭಯೋತ್ಪಾದನಾ ನಿಗ್ರಹ ಕಾಯ್ದೆಗೆ ತಿದ್ದುಪಡಿ ತರುವ ಸುಗ್ರೀವಾಜ್ಞೆಯನ್ನು ಅನುಮೋದಿಸಿದ ಬಳಿಕ ರಾಷ್ಟ್ರಪತಿಗಳು ಸಹಿ ಹಾಕಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.