ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಾಂಗ್ಲಾ: ಮಾಜಿ ಪ್ರಧಾನಿ ಖಲಿದಾ ಜಿಯಾ ಖುಲಾಸೆ

Published : 3 ಸೆಪ್ಟೆಂಬರ್ 2024, 14:08 IST
Last Updated : 3 ಸೆಪ್ಟೆಂಬರ್ 2024, 14:08 IST
ಫಾಲೋ ಮಾಡಿ
Comments

ಢಾಕಾ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲಿದಾ ಜಿಯಾ ಅವರನ್ನು ಐದು ಪ್ರತ್ಯೇಕ ಪ್ರಕರಣಗಳಲ್ಲಿ ಮಂಗಳವಾರ ಖುಲಾಸೆಗೊಳಿಸಲಾಗಿದೆ.

‘ನಕಲಿ ಜನ್ಮದಿನ’ ಆಚರಣೆ ಮತ್ತು ಯುದ್ಧಾಪರಾಧಿಗಳನ್ನು ಬೆಂಬಲಿಸಿದ ಪ್ರಕರಣಗಳೂ ಇದರಲ್ಲಿ ಸೇರಿವೆ ಎಂದು ಮಾಧ್ಯಮ ವರದಿ ತಿಳಿಸಿದೆ.

ಢಾಕಾದ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ನಾಲ್ಕು ಪ್ರಕರಣಗಳಲ್ಲಿ ಖುಲಾಸೆಗೊಳಿಸಿದ್ದರೆ, ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಒಂದು ಪ್ರಕರಣದಲ್ಲಿ ಖುಲಾಸೆಗೊಳಿಸಿದೆ ಎಂದು ದಿ ಢಾಕಾ ಟ್ರಿಬ್ಯೂನ್‌ ವರದಿ ಮಾಡಿದೆ.

ಅರ್ಜಿದಾರರು ನ್ಯಾಯಾಲಯಕ್ಕೆ ಹಾಜರಾಗದ ಕಾರಣ ಬಾಂಗ್ಲಾದೇಶ ನ್ಯಾಷನಲಿಸ್ಟ್‌ ಪಾರ್ಟಿ (ಬಿಎನ್‌ಪಿ) ಮುಖ್ಯಸ್ಥೆಯಾದ 79 ವರ್ಷದ ಜಿಯಾ ಅವರು ಖುಲಾಸೆಗೊಂಡಿದ್ದಾರೆ. 2016ರ ಆಗಸ್ಟ್‌ನಲ್ಲಿ ಪತ್ರಕರ್ತರೊಬ್ಬರು ಜಿಯಾ ‘ನಕಲಿ ಜನ್ಮ ದಿನ‘ ಆಚರಿಸಿಕೊಂಡಿದ್ದಾರೆ ಎಂದು ದೂರು ದಾಖಲಿಸಿದ್ದರೆ, 2016ರ ನವೆಂಬರ್‌ನಲ್ಲಿ ಬಾಂಗ್ಲಾದೇಶ ಜನನೇತ್ರಿ ಪರಿಷತ್‌ನ ಅಧ್ಯಕ್ಷ ಎ.ಬಿ.ಸಿದ್ಧಿಕಿ ಅವರು ಜಿಯಾ ಅವರು ’ಯುದ್ಧಾಪರಾಧಿಗಳನ್ನು ಬೆಂಬಲಿಸಿದ್ದಾರೆ‘ ಎಂದು ಪ್ರಕರಣ ದಾಖಲಿಸಿದ್ದರು. ಜಿಯಾ ಅವರು 1991ರ ಮಾರ್ಚ್‌ನಿಂದ 1996ರ ಮಾರ್ಚ್‌ವರೆಗೆ ಬಾಂಗ್ಲಾದೇಶದ ಪ್ರಧಾನಿಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT