ವಾಷಿಂಗ್ಟನ್: ಬಾಂಗ್ಲಾದೇಶದಲ್ಲಿರುವ ಅಲ್ಪಸಂಖ್ಯಾತ ಹಿಂದೂಗಳನ್ನು ರಕ್ಷಣೆ ಮಾಡುವ ಸಂಪೂರ್ಣ ಹೊಣೆಗಾರಿಕೆ ಅಲ್ಲಿನ ಮಧ್ಯಂತರ ಸರ್ಕಾರದ ಮೇಲಿದೆ ಎಂದು ಅಮೆರಿಕ ಕಾಂಗ್ರೆಸ್ನ ಪ್ರಭಾವಿ ಸದಸ್ಯರೊಬ್ಬರು ಹೇಳಿದ್ದಾರೆ.

ವಾರಾಂತ್ಯದಲ್ಲಿ ವಾಷಿಂಗ್ಟನ್ನ ಶ್ವೇತಭವನದವರೆಗೆ ರ್ಯಾಲಿ ನಡೆಸಿದ್ದ ಬಾಂಗ್ಲಾದೇಶ ಹಿಂದೂಗಳು, ಬಂಧಿತ ಹಿಂದೂ ಧಾರ್ಮಿಕ ನಾಯಕ ಚಿನ್ಮಯಿ ಕೃಷ್ಣ ದಾಸ್ ಬಿಡುಗಡೆ ಮತ್ತು ಬಾಂಗ್ಲಾದೇಶದಲ್ಲಿ ಹಿಂದೂಗಳ ರಕ್ಷಣೆಗೆ ಒತ್ತಾಯಿಸಿದ್ದರು.

‘ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ತನ್ನ ಹಿಂದೂ ಅಲ್ಪಸಂಖ್ಯಾತರನ್ನು ರಕ್ಷಿಸುವ ಸಂಪೂರ್ಣ ಹೊಣೆಗಾರಿಕೆಯನ್ನು ಹೊಂದಿದೆ. ಇತ್ತೀಚಿನ ದಾಳಿ ಮತ್ತು ಕಿರುಕುಳದಿಂದ ಬೇಸತ್ತು ಪ್ರತಿಭಟನೆ ನಡೆಸಿದ ಸಾವಿರಾರು ಮಂದಿ ಅಲ್ಪಸಂಖ್ಯಾತ ಹಿಂದೂಗಳ ಆಕ್ರೋಶಕ್ಕೆ ಅರ್ಥಪೂರ್ಣವಾಗಿ ಪರಿಹಾರ ಸಿಗಬೇಕಿದೆ’ಎಂದು ಕಾಂಗ್ರೆಸ್ ಸದಸ್ಯ ಬ್ರಾಡ್ ಶೆರ್ಮನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಸರ್ಕಾರ ಪತನವಾದ ನಂತರದಲ್ಲಿ ನಡೆದ ಹಿಂಸಾಚಾರ, ಹತ್ಯೆಗಳು ಮತ್ತು ಇತರ ಹಕ್ಕುಗಳ ಉಲ್ಲಂಘನೆ ಕುರಿತಂತೆ ಬಾಂಗ್ಲಾದೇಶದ ಹಿಂದೂ, ಬೌದ್ಧ, ಕ್ರಿಶ್ಚಿಯನ್ ಯೂನಿಟಿ ಕೌನ್ಸಿಲ್ ಮತ್ತು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈ ಕಮಿಷನರ್ ವೋಲ್ಕರ್ ಟರ್ಕ್ ತನಿಖೆಗೆ ಒತ್ತಾಯಿಸಿದ್ದಾರೆ. ಈ ನಡುವೆ, ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರಿದಿದ್ದು, ಅಲ್ಲಿನ ಆಡಳಿತವು ಹಿಂದೂ ಸಮುದಾಯದ ವಿರುದ್ಧದ ಹಿಂಸಾಚಾರವನ್ನು ತೊಡೆದುಹಾಕುವಲ್ಲಿ ಬದ್ಧತೆ ಪ್ರದರ್ಶಿಸಬೇಕು’ಎಂದು ಶೆರ್ಮನ್ ಹೇಳಿದ್ದಾರೆ.

ನಿರ್ಗಮಿತ ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಆಡಳಿತವು, ಬಾಂಗ್ಲಾದೇಶದಲ್ಲಿ ಹಿಂದೂಗಳ ವಿರುದ್ಧ ಮೂಲಭೂತವಾದಿ ಇಸ್ಲಾಮಿಸ್ಟ್ಗಳ ಹಿಂಸಾಚಾರ ಮತ್ತಷ್ಟು ಉಲ್ಬಣಗೊಳ್ಳುವುದನ್ನು ತಡೆಯಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವಂತೆ HinduACTionನ ಕಾರ್ಯನಿರ್ವಾಹಕ ನಿರ್ದೇಶಕ ಉತ್ಸವ್ ಚಕ್ರವರ್ತಿ ಕರೆ ನೀಡಿದ್ದಾರೆ.

‘ಬಾಂಗ್ಲಾದೇಶದ ಮಧ್ಯಂತರ ಸರ್ಕಾರದಿಂದ ಸೆರೆವಾಸ ಅನುಭವಿಸುತ್ತಿರುವ ಹಿಂದೂ ಸನ್ಯಾಸಿ ಮತ್ತು ನಾಗರಿಕ ಹಕ್ಕುಗಳ ರಕ್ಷಕ ಚಿನ್ಮಯಿ ಕೃಷ್ಣ ಬ್ರಹ್ಮಚಾರಿ ಅವರಿಗೆ ಕಸ್ಟಡಿಯಲ್ಲಿ ಜೀವಕ್ಕೆ ಗಂಭೀರ ಬೆದರಿಕೆ ಇದೆ ಎಂಬ ಮಾಹಿತಿ ನಮಗೆ ಸಿಕ್ಕಿದೆ’ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.