ಢಾಕಾ (ಎಪಿ): ‘ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ಹಾಗೂ ಅಧಿಕಾರಿಗಳು ಪತ್ರಕರ್ತರ ರಕ್ಷಣೆಗೆ ಧಾವಿಸಬೇಕು. ಪತ್ರಿಕಾ ಸ್ವಾತಂತ್ರ್ಯವನ್ನು ಎತ್ತಿಹಿಡಿಯಬೇಕು’ ಎಂದು ಪತ್ರಕರ್ತರು, ಸಂಪಾದಕರು ಮತ್ತು ಮಾಧ್ಯಮ ಸಂಸ್ಥೆಗಳ ಮಾಲೀಕರು ಒತ್ತಾಯಿಸಿದ್ದಾರೆ.

ಸಂಪಾದಕರ ಪರಿಷತ್ತು ಮತ್ತು ಬಾಂಗ್ಲಾದೇಶ ಪತ್ರಿಕೆಗಳ ಮಾಲೀಕರ ಸಂಘ ಜಂಟಿಯಾಗಿ ಶನಿವಾರ ಆಯೋಜಿಸಿದ್ದ ಸಮ್ಮೇಳನದಲ್ಲಿ ಪತ್ರಕರ್ತರು ಈ ಹಕ್ಕೊತ್ತಾಯ ಮಂಡಿಸಿದ್ದಾರೆ.

‘ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರವು ಮಾಧ್ಯಮಗಳನ್ನು ವ್ಯವಸ್ಥಿತವಾಗಿ ಗುರಿ ಮಾಡಲಾಗುತ್ತಿದೆ. ದೇಶದ ಪ್ರಮುಖ ಇಂಗ್ಲಿಷ್ ಪತ್ರಿಕೆ ‘ಡೈಲಿ ಸ್ಟಾರ್’ ಮತ್ತು ಬಂಗಾಳಿ ಪತ್ರಿಕೆ ‘ಪ್ರೋಥೋಮ್ ಅಲೊ’ ಮೇಲೆ ಕಿಡಿಗೇಡಿಗಳ ಗುಂಪು ನಡೆಸಿದ ದಾಳಿಯನ್ನು ತಡೆಯುವಲ್ಲಿ ಆಡಳಿತವು ವಿಫಲವಾಗಿದೆ’ ಎಂದು ಆರೋಪಿಸಿದ್ದಾರೆ.

‘ಮಾಧ್ಯಮಗಳು ಮತ್ತು ಪ್ರಜಾಸತ್ತಾತ್ಮಕ ಸಂಸ್ಥೆಗಳನ್ನು ಹತ್ತಿಕ್ಕುವ ಪ್ರಯತ್ನಗಳು ಅಪಾಯಕಾರಿ ಮಾದರಿಯನ್ನು ಪ್ರತಿಬಿಂಬಿಸುತ್ತವೆ’ ಎಂದು ಸಂಪಾದಕರ ಪರಿಷತ್ತಿನ ಅಧ್ಯಕ್ಷ ನೂರುಲ್ ಕಬೀರ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.