ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಾಂಗ್ಲಾ: ಮಾಜಿ ಸಚಿವ ಅರಾಫತ್‌ ಬಂಧನ

Published : 27 ಆಗಸ್ಟ್ 2024, 15:28 IST
Last Updated : 27 ಆಗಸ್ಟ್ 2024, 15:28 IST
ಫಾಲೋ ಮಾಡಿ
Comments

ಢಾಕಾ: ಮಾಹಿತಿ ಮತ್ತು ಪ್ರಸಾರ ಖಾತೆ ಮಾಜಿ ರಾಜ್ಯ ಸಚಿವ ಮೊಹಮ್ಮದ್‌ ಅಲಿ ಅರಾಫತ್‌ ಅವರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಅಲಿ ವಿರುದ್ಧ ಹಲವಾರು ಪ್ರಕರಣಗಳಿವೆ. ಅಲ್ಲದೇ, ಇತ್ತೀಚೆಗೆ ಸರ್ಕಾರದ ವಿರುದ್ಧ ನಡೆದ ಪ್ರತಿಭಟನೆ ವೇಳೆ ವಿದ್ಯಾರ್ಥಿಯೊಬ್ಬನನ್ನು ಕೊಲೆ ಮಾಡಿದ ಆರೋಪವನ್ನು ಸಹ ಅಲಿ ಎದುರಿಸುತ್ತಿದ್ದಾರೆ.

ಅವಾಮಿ ಲೀಗ್‌ ನೇತೃತ್ವದ ಸರ್ಕಾರವನ್ನು ಪದಚ್ಯುತಗೊಳಿಸಿದ ನಂತರ ಅರಾಫತ್ ದೇಶ ತೊರೆಲಿದ್ದಾರೆ ಎಂಬ ವದಂತಿಗಳು ಕೇಳಿಬಂದ ಬೆನ್ನಲ್ಲೇ, ಅವರನ್ನು ಬಂಧಿಸಲಾಗಿದೆ.

‘ಢಾಕಾದ ಗುಲ್ಷನ್‌ ಪ್ರದೇಶದಲ್ಲಿ ಅರಾಫತ್‌ ಅವರನ್ನು ಬಂಧಿಸಲಾಗಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಿ, ಅವರನ್ನು ಕಸ್ಟಡಿಗೆ ನೀಡುವಂತೆ ಕೋರಲಾಗುವುದು‘ ಎಂದು ಪೊಲೀಸರು ಹೇಳಿದ್ದಾರೆ.

ಹಸೀನಾ ವಿರುದ್ಧ ಮತ್ತೆ 5 ಪ್ರಕರಣ: ಪದಚ್ಯುತ ಪ್ರಧಾನಿ ಶೇಖ್‌ ಹಸೀನಾ ವಿರುದ್ಧ ಮತ್ತೆ ಐದು ಕೊಲೆ ಪ್ರಕರಣಗಳನ್ನು ದಾಖಲಿಸಲಾಗಿದೆ.

ಇದರೊಂದಿಗೆ, ಅವರ ವಿರುದ್ಧ ದಾಖಲಾಗಿರುವ ಪ್ರಕರಣಗಳ ಸಂಖ್ಯೆ 71ಕ್ಕೆ ಏರಿದಂತಾಗಿದೆ ಎಂದು ಮಾಧ್ಯಮಗಳು ಮಂಗಳವಾರ ವರದಿ ಮಾಡಿವೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT