ಢಾಕಾ: ಭಯೋತ್ಪಾದನಾ ವಿರೋಧಿ ಕಾನೂನಿನ ಅಡಿಯಲ್ಲಿ ಮೊಹಮ್ಮದ್ ಯೂನಸ್ ನೇತೃತ್ವದ ಬಾಂಗ್ಲಾ ಮಧ್ಯಂತರ ಸರ್ಕಾರ, ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರ ‘ಅವಾಮಿ ಲೀಗ್’ ಪಕ್ಷವನ್ನು ಶನಿವಾರ ನಿಷೇಧಿಸಿದೆ.

‘ಭಯೋತ್ಪಾದಕ ಚಟುವಟಿಕೆಗಳು ಮತ್ತು ಸರ್ವಾಧಿಕಾರಿ ಆಡಳಿತ ನಡೆಸಿದ ಆರೋಪದ ಮೇರೆಗೆ ಅವಾಮಿ ಲೀಗ್ ಪಕ್ಷವನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳ ನೇತೃತ್ವದಲ್ಲಿ ಹೊಸದಾಗಿ ರಚನೆಯಾದ ನ್ಯಾಷನಲ್ ಸಿಟಿಜನ್ ಪಾರ್ಟಿ (ಎನ್ಸಿಪಿ) ಕಾರ್ಯಕರ್ತರು ಗುರುವಾರ ಢಾಕಾದಾದ್ಯಂತ ಪ್ರತಿಭಟನೆ ನಡೆಸಿದ್ದರು. ಇದಾದ ಬಳಿಕ ಪಕ್ಷವನ್ನು ನಿಷೇಧಿಸುವ ಘೋಷಣೆ ಹೊರಬಿದ್ದಿದೆ.

ಈ ಸಂಬಂಧ ಅಧಿಕೃತ ಗೆಜೆಟ್ ಅಧಿಸೂಚನೆಯನ್ನು ಶೀಘ್ರದಲ್ಲಿಯೇ ಹೊರಡಿಸಲಾಗುವುದು ಎಂದು ಯೂನಸ್ ಕಚೇರಿ ತಿಳಿಸಿದೆ.

ದೇಶದ ಭದ್ರತೆ ಮತ್ತು ಸಾರ್ವಭೌಮತ್ವವನ್ನು ರಕ್ಷಿಸುವ ಹಿತದೃಷ್ಟಿಯಿಂದ ಬಾಂಗ್ಲಾದೇಶದ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯಲ್ಲಿ ಅವಾಮಿ ಲೀಗ್ ಮತ್ತು ಅದರ ನಾಯಕರ ವಿಚಾರಣೆ ಪೂರ್ಣಗೊಳ್ಳುವವರೆಗೆ ನಿಷೇಧವು ಜಾರಿಯಲ್ಲಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅವಾಮಿ ಲೀಗ್ ಪಕ್ಷದ ಆಡಳಿತವನ್ನು ಪದಚ್ಯುತಗೊಳಿಸಲು ಕಾರಣರಾದ ನಾಯಕರು ಮತ್ತು ಕಾರ್ಯಕರ್ತರ ಭದ್ರತೆಗಾಗಿಯೂ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದೂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
.ಶೇಖ್ ಹಸೀನಾ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದು ಮಾಡಲು ಬಾಂಗ್ಲಾ ಸರ್ಕಾರ ನಿರ್ಧಾರ.
ಪಕ್ಷವನ್ನು ನಿಷೇಧಿಸುವ ನಿರ್ಧಾರ ತೆಗೆದುಕೊಳ್ಳುವ ಮೊದಲು ಸರ್ಕಾರವು ವಿವಿಧ ರಾಜಕೀಯ ಪಕ್ಷಗಳೊಂದಿಗೆ ಸಂಪರ್ಕ ಸಾಧಿಸಿದೆ ಎಂದು ಯೂನಸ್ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

1949ರಲ್ಲಿ ರಚನೆಯಾದ ಅವಾಮಿ ಲೀಗ್, ಆಗಿನ ಪೂರ್ವ ಪಾಕಿಸ್ತಾನದಲ್ಲಿ ಬಂಗಾಳಿಗಳ ಸ್ವಾಯತ್ತತೆಗಾಗಿ ದಶಕಗಳ ಕಾಲ ನಡೆದ ಚಳುವಳಿಯನ್ನು ಮುನ್ನಡೆಸಿತ್ತು.
.ಶೇಖ್ ಹಸೀನಾ ನೇತೃತ್ವದ ‘ಅವಾಮಿ ಲೀಗ್’ ನಿಷೇಧಕ್ಕೆ ಬಾಂಗ್ಲಾ ಸರ್ಕಾರ ಚಿಂತನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.