ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್‌: ಪಿಟಿಐ ಅಧ್ಯಕ್ಷರಾಗಿ ಗೋಹರ್ ಖಾನ್ ಆಯ್ಕೆ

Published 1 ಮಾರ್ಚ್ 2024, 14:16 IST
Last Updated 1 ಮಾರ್ಚ್ 2024, 14:16 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ಮಾಜಿ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ್ ತೆಹ್ರೀಕ್–ಇ–ಇನ್ಸಾಫ್‌ (ಪಿಟಿಐ) ಪಕ್ಷದ ಅಧ್ಯಕ್ಷರಾಗಿ ಗೋಹರ್ ಖಾನ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಪಕ್ಷವು ಗುರುವಾರ ಘೋಷಿಸಿದೆ.

ಗೋಹರ್ ಖಾನ್ ಹೊರತುಪಡಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಇಬ್ಬರು ನಾಮಪತ್ರ ವಾಪಸ್ ಪಡೆದಿದ್ದರಿಂದ, ಖಾನ್‌ ಅವಿರೋಧವಾಗಿ ಆಯ್ಕೆಯಾದರು. ಪಕ್ಷದ ಅಧ್ಯಕ್ಷರಾಗಿ ಎರಡು ಬಾರಿ ಆಯ್ಕೆಯಾದ ಏಕೈಕ ನಾಯಕ ಗೋಹರ್ ಎಂದು ಜಿಯೋ ನ್ಯೂಸ್‌ ವರದಿ ಮಾಡಿದೆ.

ಡಾ.ಯಾಸ್ಮಿನ್ ರಶೀದ್, ಅಲಿ ಅಮೀನ್ ಗಂದಾಪುರ ಹಾಗೂ ಹಲೀಮ್ ಆದಿಲ್ ಶೇಖ್ ಅವರು ಕ್ರಮವಾಗಿ ಪಂಜಾಬ್, ಖೈಬರ್ ಪಖ್ತುಂಖ್ವಾ ಮತ್ತು ಸಿಂಧ್‌ ಘಟಕದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT