ಇಸ್ಲಾಮಾಬಾದ್: ಭಾರತದ ಹಲವು ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ ಎಂಬ ಭಾರತೀಯ ಮಾಧ್ಯಮಗಳ ವರದಿಗಳನ್ನು ಪಾಕಿಸ್ತಾನ ಅಲ್ಲಗಳೆದಿದೆ. ಜತೆಗೆ, ಇಂತಹ ವರದಿಗಳು ‘ಸಂಪೂರ್ಣವಾಗಿ ಆಧಾರರಹಿತ ಮತ್ತು ಪ್ರಚಾರದ ಭಾಗವಾಗಿವೆ ಎಂದು ಹೇಳಿದೆ.

‘ಯಾವುದೇ ವಿಶ್ವಾಸಾರ್ಹ ತನಿಖೆಯಿಲ್ಲದೆ ಪಾಕಿಸ್ತಾನದ ವಿರುದ್ಧ ಭಾರತ ಪದೇ ಪದೇ ಆರೋಪಗಳನ್ನು ಹೊರಿಸುವ ಮೂಲಕ ದಾಳಿ ನಡೆಸಲು ಕಾರಣ ಹುಡುಕುವುದು ಮತ್ತು ನಮ್ಮ ದೇಶವನ್ನು ಮತ್ತಷ್ಟು ಅಸ್ಥಿರಗೊಳಿಸುವ ಉದ್ದೇಶಪೂರ್ವಕ ತಂತ್ರವನ್ನು ಪ್ರತಿಬಿಂಬಿಸುತ್ತದೆ’ ಎಂದು ಪಾಕ್ ವಿದೇಶಾಂಗ ಕಚೇರಿ ಗುರುವಾರ ತಡರಾತ್ರಿ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.

‘ದಾಳಿ–ಪ್ರತಿದಾಳಿಯಂತಹ ಕ್ರಮಗಳಿಂದ ಪ್ರಾದೇಶಿಕ ಶಾಂತಿಗೆ ಮತ್ತಷ್ಟು ಅಪಾಯವನ್ನುಂಟು ಮಾಡುವುದಲ್ಲದೆ, ರಾಜಕೀಯ ಮತ್ತು ಮಿಲಿಟರಿ ಉದ್ದೇಶಗಳಿಗಾಗಿ ತಪ್ಪು ಮಾಹಿತಿಯನ್ನು ಹಂಚಿಕೊಳ್ಳುವುದನ್ನು ಸಾಬೀತುಪಡಿಸಿದಂತಾಗುತ್ತದೆ’ ಎಂದು ಪಾಕ್ ವಿದೇಶಾಂಗ ಕಚೇರಿ ಹೇಳಿದೆ.

ಭಾರತದ ಇಂತಹ ಅಪಾಯಕಾರಿ ನಡವಳಿಕೆಯನ್ನು ಅಂತರರಾಷ್ಟ್ರೀಯ ಸಮುದಾಯ ಗಂಭೀರವಾಗಿ ಗಮನಿಸಬೇಕು. ಜತೆಗೆ, ಸಂಯಮ ಮತ್ತು ಜವಾಬ್ದಾರಿಯ ಬಗ್ಗೆ ಸಲಹೆ ನೀಡಬೇಕೆಂದು ಒತ್ತಾಯಿಸುವುದಾಗಿ ಪಾಕ್ ಹೇಳಿದೆ.

ಭಾರತದ ಸಶಸ್ತ್ರ ಪಡೆಗಳು ‘ಆಪರೇಷನ್ ಸಿಂಧೂರ’ದ ಮೂಲಕ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ ಗುರುವಾರ ಗಡಿಯಲ್ಲಿ ಎರಡೂ ದೇಶಗಳ ನಡುವೆ ಸೇನಾ ಸಂಘರ್ಷ ತೀವ್ರಗೊಂಡಿದೆ.

‘ದೇಶದ ಪಶ್ಚಿಮ ಭಾಗದಲ್ಲಿರುವ ಭಾರತೀಯ ವಾಯುಪಡೆಯ 13 ಸೇರಿದಂತೆ ಒಟ್ಟು 15 ಸೇನಾ ನೆಲೆಗಳ ಮೇಲೆ ಡ್ರೋನ್ ಹಾಗೂ ಕ್ಷಿಪಣಿಗಳ ಮೂಲಕ ದಾಳಿ ನಡೆಸಿ ಧ್ವಂಸಗೊಳಿಸುವ ಪಾಕಿಸ್ತಾನದ ಪ್ರಯತ್ನವನ್ನು ಭಾರತೀಯ ಸಶಸ್ತ್ರ ಪಡೆಗಳು ವಿಫಲಗೊಳಿಸಿವೆ. ಪಾಕ್ ಕ್ರಿಯೆಗೆ ಪ್ರತಿ ದಾಳಿಯ ಮೂಲಕ ಲಾಹೋರ್ನಲ್ಲಿರುವ ವಾಯು ರಕ್ಷಣಾ ವ್ಯವಸ್ಥೆಯನ್ನು ನಾಶಗೊಳಿಸಲಾಗಿದೆ’ ಎಂದು ಭಾರತೀಯ ಅಧಿಕಾರಿಗಳು ಹೇಳಿದ್ದಾರೆ.

‘ಅವಂತಿಪುರ, ಶ್ರೀನಗರ, ಜಮ್ಮು, ಪಠಾಣ್ಕೋಟ್, ಅಮೃತಸರ, ಕಪೂರ್ಥಲಾ, ಜಲಂಧರ್, ಲುಧಿಯಾನಾ, ಅದಂಪುರ, ಬಠಿಂಡಾ, ಚಂಡೀಗಢ, ನಾಲ್, ಫಲೋಡಿ, ಉತ್ತರಲಾಯಿ ಮತ್ತು ಭುಜ್ ಸೇರಿದಂತೆ ಉತ್ತರ ಮತ್ತು ಪಶ್ಚಿಮ ಭಾರತದ ಹಲವಾರು ಮಿಲಿಟರಿ ನೆಲೆಗಳ ಮೇಲೆ ಪಾಕಿಸ್ತಾನವು ಗುರುವಾರ ರಾತ್ರಿ ದಾಳಿ ನಡೆಸಲು ಪ್ರಯತ್ನಿಸಿತು. ಇದನ್ನು ನಮ್ಮ ಸಶಸ್ತ್ರ ಪಡೆಗಳು ವಿಫಲಗೊಳಿಸಿದವು. ಹಲವಾರು ಸ್ಥಳಗಳಿಂದ ದಾಳಿಯ ಅವಶೇಷಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ. ಇದು ಪಾಕ್ ನಡೆಸಿದ ಕೃತ್ಯಕ್ಕೆ ಸಾಕ್ಷಿ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಅಂತರರಾಷ್ಟ್ರೀಯ ಗಡಿಯಲ್ಲಿರುವ ಪಾಕಿಸ್ತಾನ ಮೂಲದ ಡ್ರೋನ್ಗಳು ಮತ್ತು ಕ್ಷಿಪಣಿಗಳನ್ನು ಹೊಡೆದುರುಳಿಸಲಾಗಿದೆ ಎಂದು ರಕ್ಷಣಾ ಸಚಿವಾಲಯದ ವಕ್ತಾರರು ಖಚಿತಪಡಿಸಿದ್ದಾರೆ.
.India-Pak Tension | ಡ್ರೋನ್ ದಾಳಿಯಲ್ಲಿ ನಾಲ್ವರು ಸೈನಿಕರಿಗೆ ಗಾಯ: ಪಾಕ್.India-Pak Tension: ಗಡಿ ಚೆಕ್ಪೋಸ್ಟ್ಗಳಲ್ಲಿ ‘ಬೀಟಿಂಗ್ ರಿಟ್ರೀಟ್’ ಸ್ಥಗಿತ .India-Pakistan Tensions: ಗಡಿಯಲ್ಲಿ ಸೇನಾ ಸಂಘರ್ಷ ತೀವ್ರ.India-Pakistan tensions: ಅಮೆರಿಕ ಮಧ್ಯಸ್ಥಿಕೆ ನಯವಾಗಿ ತಿರಸ್ಕರಿಸಿದ ಭಾರತ.India-Pakistan Tensions: 2ನೇ ದಿನವೂ ಪಾಕ್ ಷೇರುಪೇಟೆ ಪತನ.India-Pakistan Tensions: ರೂಪಾಯಿ ಮೌಲ್ಯ 84 ಪೈಸೆ ಇಳಿಕೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.