ಢಾಕಾ: ಬಾಂಗ್ಲಾದೇಶವು ಭಯೋತ್ಪಾದನಾ ವಿರೋಧಿ ಕಾನೂನಿನಡಿ ಜಮಾತ್-ಎ-ಇಸ್ಲಾಮಿ ಮತ್ತು ಅದರ ವಿದ್ಯಾರ್ಥಿ ಘಟಕವಾದ ಇಸ್ಲಾಮಿ ಛಾತ್ರಾ ಶಿಬಿರವನ್ನು ಗುರುವಾರ ನಿಷೇಧಿಸಿದೆ.

ಮೂಲಭೂತವಾದಿ ಪಕ್ಷವು ಸಾರ್ವಜನಿಕ ಭದ್ರತೆಗೆ ಒಡ್ಡಿರುವ ಬೆದರಿಕೆಯನ್ನು ಉಲ್ಲೇಖಿಸಿ, ಗೃಹ ಸಚಿವಾಲಯದ ಸಾರ್ವಜನಿಕ ಭದ್ರತಾ ವಿಭಾಗವು ಗುರುವಾರ ಜಮಾತ್-ಎ-ಇಸ್ಲಾಮಿ ಮೇಲಿನ ನಿಷೇಧವನ್ನು ತನ್ನ ಅಧಿಸೂಚನೆಯಲ್ಲಿ ದೃಢಪಡಿಸಿದೆ.

ಸರ್ಕಾರಿ ಉದ್ಯೋಗಗಳಲ್ಲಿ ಕೋಟಾ ನೀಡುವಂತೆ ಕೋರಿ ದೇಶದಾದ್ಯಂತ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ಕನಿಷ್ಠ 150 ಜನರ ಸಾವಿನ ನಂತರ, ಪ್ರತಿಭಟನೆಯನ್ನು ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿ, ಜಮಾತ್-ಎ-ಇಸ್ಲಾಮಿಯನ್ನು ನಿಷೇಧಿಸಲು ಬಾಂಗ್ಲಾದೇಶ ಸರ್ಕಾರವು ಮಂಗಳವಾರ ನಿರ್ಧರಿಸಿತ್ತು.

ಪ್ರಧಾನಿ ಶೇಖ್ ಹಸೀನಾ ಅವರ ಅವಾಮಿ ಲೀಗ್ ನೇತೃತ್ವದ 14 ಪಕ್ಷಗಳ ಮೈತ್ರಿಕೂಟದ ಸಭೆಯು ಜಮಾತ್ ಅನ್ನು ರಾಜಕೀಯದಿಂದ ನಿಷೇಧಿಸಬೇಕು ಎಂಬ ನಿರ್ಣಯವನ್ನು ಅಂಗೀಕರಿಸಿದ ನಂತರ ಈ ಬೆಳವಣಿಗೆ ನಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.