ಬೀಜಿಂಗ್ (ಎ.ಪಿ): ಚೀನಾದ ರಾಜಧಾನಿ ಬೀಜಿಂಗ್‌ನಲ್ಲಿ 140 ವರ್ಷಗಳ ಇತಿಹಾಸದಲ್ಲಿಯೇ ದಾಖಲೆ ಪ್ರಮಾಣದ ಮಳೆ ಸುರಿದಿದೆ. ಚಂಡಮಾರುತದ ಪರಿಣಾಮದಿಂದಾಗಿ ಸುರಿದ ಮಳೆಯಿಂದಾಗಿ ಹಲವು ರಸ್ತೆಗಳು ಕಾಲುವೆಗಳ ಸ್ವರೂಪವನ್ನು ಪಡೆದಿವೆ.
ಶನಿವಾರದಿಂದ ಬುಧವಾರ ಬೆಳಿಗ್ಗೆಯವರೆಗಿನ ಅವಧಿಯಲ್ಲಿ ಒಟ್ಟು 744.8 ಮಿ.ಮೀ ಮಳೆ ಸುರಿದಿದ್ದು, ಇದು ದಾಖಲೆ ಪ್ರಮಾಣದ್ದಾಗಿದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ.
ಧಾರಾಕಾರ ಮಳೆ ಸಂಬಂಧಿತ ಅವಘಡಗಳಲ್ಲಿ 21 ಜನರು ಮೃತಪಟ್ಟಿದ್ದು, 26 ಮಂದಿ ನಾಪತ್ತೆಯಾಗಿದ್ದಾರೆ. ವಿದ್ಯುತ್ ಪೂರೈಕೆ, ಸಂಚಾರ ವ್ಯತ್ಯಯವಾಗಿದೆ. ಪ್ರವಾಹ ಪೀಡಿತ ಸ್ಥಳಗಳಲ್ಲಿ ಜನರ ರಕ್ಷಣೆಗೆ ರಕ್ಷಣಾ ತಂಡಗಳನ್ನು ನಿಯೋಜಿಸಲಾಗಿದೆ.