ಸೋಮವಾರ, 3 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಓಮೈಕ್ರಾನ್‌ ಹೆಚ್ಚಳ: ಚೀನಾ ರಾಜಧಾನಿ ಬೀಜಿಂಗ್‌ನಲ್ಲಿ ಸೆಮಿ ಲಾಕ್‌ಡೌನ್‌ ಜಾರಿ

Last Updated 4 ಮೇ 2022, 14:20 IST
ಅಕ್ಷರ ಗಾತ್ರ

ಬೀಜಿಂಗ್‌: ಓಮೈಕ್ರಾನ್‌ ಹೆಚ್ಚಳದ ಹಿನ್ನೆಲೆಯಲ್ಲಿ ಚೀನಾದ ರಾಜಧಾನಿ ಬೀಜಿಂಗ್‌ನಲ್ಲಿ ಮೆಟ್ರೊ ನಿಲ್ದಾಣ, ಶಾಲೆಗಳು, ವ್ಯಾಪಾರ– ವಹಿವಾಟು, ರೆಸ್ಟೋರೆಂಟ್‌ ಮತ್ತು ಜಿಮ್‌ಗಳನ್ನು ಬುಧವಾರದಿಂದ ಬಂದ್‌ ಮಾಡಲಾಗಿದೆ. ಅಲ್ಲದೆ ಸೋಂಕು ತಡೆಗಟ್ಟುವ ಕ್ರಮವಾಗಿ ಕೋವಿಡ್‌ ಪತ್ತೆ ಪರೀಕ್ಷೆಯನ್ನು ಹೆಚ್ಚಿಸಲಾಗಿದೆ.

ಬೀಜಿಂಗ್‌ನಲ್ಲಿ ಕಳೆದ 24 ಗಂಟೆಗಳಲ್ಲಿ 53 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 500ಕ್ಕೆ ಏರಿಕೆಯಾಗಿದ್ದು, ಕಠಿಣ ನಿರ್ಬಂಧಗಳನ್ನು ವಿಧಿಸಲಾಗುತ್ತಿದೆ. ಮುನ್ನಚ್ಚರಿಕೆ ಕ್ರಮವಾಗಿ ಶಾಲೆಗಳ ಪುನರಾರಂಭವನ್ನು ಮುಂದೂಡಲಾಗಿದೆ.

40 ಸುರಂಗ ಮಾರ್ಗಗಳನ್ನು ಮುಚ್ಚಲಾಗಿದೆ. ಶೇ 10ರಷ್ಟು ಬಸ್‌ ಸಂಚಾರವನ್ನು ರದ್ದುಗೊಳಿಸಲಾಗಿದೆ.

ಬೀಜಿಂಗ್‌ನಿಂದ ಹೊರ ಹೋಗಲು ಕೋವಿಡ್‌ ನೆಗಟಿವ್‌ ವರದಿ ಕಡ್ಡಾಯಗೊಳಿಸಲಾಗಿದೆ. ವಿಮಾನ ನಿಲ್ದಾಣ ಮತ್ತು ರೈಲು ನಿಲ್ದಾಣದಲ್ಲಿ ತಪಾಸಣೆಯನ್ನು ಬಿಗಿಗೊಳಿಸಲಾಗಿದೆ.

ಚೀನಾದ ವಾಣಿಜ್ಯ ರಾಜಧಾನಿ ಶಾಂಘೈನಲ್ಲಿ ಕಳೆದೊಂದು ತಿಂಗಳಿಂದ ಲಾಕ್‌ಡೌನ್‌ ಜಾರಿಯಲ್ಲಿದ್ದು, ಅಲ್ಲಿ ಬುಧವಾರ ಹೊಸದಾಗಿ 4,982 ಪ್ರಕರಣಗಳು ದೃಢಪಟ್ಟಿವೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT