ಪಾರೊ: ವಿಶ್ವದ ಅತಿ ದೊಡ್ಡ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಚಾಲನೆ ನೀಡಿರುವ ಪ್ರಧಾನಿ ಮೋದಿ ಮತ್ತು ಭಾರತದ ಜನರಿಗೆ ಭೂತಾನ್ ಪ್ರಧಾನಿ ಲೊಟೆ ಶೆರಿಂಗ್ ಶನಿವಾರ ಅಭಿನಂದನೆ ಸಲ್ಲಿಸಿದ್ದಾರೆ.

ಈ ಬಗ್ಗೆ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಭೂತಾನ್ ಪ್ರಧಾನಿ, 'ರಾಷ್ಟ್ರವ್ಯಾಪಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಚಾಲನೆ ನೀಡಿರುವ ಪ್ರಧಾನಿ ಮೋದಿ ಮತ್ತು ಭಾರತದ ಜನರಿಗೆ ನನ್ನ ಅಭಿನಂದನೆಗಳು' ಎಂದು ತಿಳಿಸಿದ್ದಾರೆ.

ಇದೇ ವೇಳೆ ಮೋದಿ ನಾಯಕತ್ವವನ್ನು ಹೊಗಳಿರುವ ಲೊಟೆ ಶೆರಿಂಗ್, 'ಲಸಿಕೆಯನ್ನು ಸಂರಕ್ಷಿಸಿ ಮತ್ತು ವಿತರಿಸುವ ನಿಟ್ಟಿನಲ್ಲಿ ನೀವು ಅಗಾಧವಾದ ನಾಯಕತ್ವ ಗುಣವನ್ನು ಪ್ರದರ್ಶಿಸಿದ್ದೀರಿ. ಈ ಸಾಂಕ್ರಾಮಿಕವು ನೀಡಿದ ನೋವಿಗೆ ಉತ್ತರವಾಗಿ ಈ ಲಸಿಕೆ ಬಂದಿದೆ' ಎಂದು ತಿಳಿಸಿದ್ದಾರೆ.

ಕೋವಿಡ್–19 ಪಿಡುಗಿನ ವಿರುದ್ಧ ಜಗತ್ತಿನ ಅತಿ ದೊಡ್ಡ, ದೇಶವ್ಯಾಪಿ ಮೊದಲ ಹಂತದ ಲಸಿಕೆ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಬೆಳಿಗ್ಗೆ ಚಾಲನೆ ನೀಡಿದ್ದಾರೆ.

ದೇಶದ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸೇರಿ ದೇಶದಾದ್ಯಂತ 3,000 ಕಡೆಗಳಲ್ಲಿ ಲಸಿಕೆ ಹಾಕಲಾಗುತ್ತಿದೆ. ಪ್ರತಿ ಲಸಿಕೆ ಕೇಂದ್ರದಲ್ಲಿ ಮೊದಲ ದಿನ 100 ಜನರಿಗೆ ಲಸಿಕೆ ಹಾಕಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.