ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂತಾನ್ ದೊರೆ ನಾಳೆ ಭಾರತಕ್ಕೆ

Published 2 ನವೆಂಬರ್ 2023, 14:05 IST
Last Updated 2 ನವೆಂಬರ್ 2023, 14:05 IST
ಅಕ್ಷರ ಗಾತ್ರ

ನವದೆಹಲಿ: ಭೂತಾನ್ ದೊರೆ ಜಿಗ್ಮೆ ಖೆಸರ್ ನಾಮಗ್ಯಾಲ್ ವಾಂಗಚುಕ್ ಅವರು ಶುಕ್ರವಾರದಿಂದ ಎಂಟು ದಿನಗಳ ಕಾಲ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಭಾರತದ ವಿದೇಶಾಂಗ ಸಚಿವಾಲಯ ತಿಳಿಸಿದೆ. 

ಈ ಪ್ರವಾಸದ ವೇಳೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದು, ಭಾರತ ಮತ್ತು ಭೂತಾನ್ ಸಂಬಂಧಕ್ಕೆ ಸಂಬಂಧಿಸಿದ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಈ ಸಭೆಗೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ಹಿರಿಯ ಅಧಿಕಾರಿಗಳನ್ನು ಆಹ್ವಾನಿಸಲಾಗಿದೆ. 

ಈ ಭೇಟಿಯು ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಹಕಾರ ಮತ್ತು ಮಾದರಿ ಸಹಭಾಗಿತ್ವಕ್ಕೆ ಅವಕಾಶ ಒದಗಿಸಲಿದೆ ಎಂದು ಭಾರತದ ವಿದೇಶಾಂಗ ಸಚಿವಾಲಯ ಹೇಳಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT