ಶನಿವಾರ, 23 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿ20 ಶೃಂಗಸಭೆಯಲ್ಲಿ ಷಿ ಜಿನ್‌ಪಿಂಗ್ ಭಾಗವಹಿಸುವ ವಿಶ್ವಾಸ ವ್ಯಕ್ತಪಡಿಸಿದ ಬೈಡನ್

Published 1 ಸೆಪ್ಟೆಂಬರ್ 2023, 4:00 IST
Last Updated 1 ಸೆಪ್ಟೆಂಬರ್ 2023, 4:00 IST
ಅಕ್ಷರ ಗಾತ್ರ

ವಾಷಿಂಗ್ಟನ್: ಭಾರತದಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಪಾಲ್ಗೊಳ್ಳುವ ವಿಶ್ವಾಸವಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ.

ಮುಂದಿನ ವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯುತ್ತಿರುವ ಜಿ 20 ಶೃಂಗಸಭೆಯಲ್ಲಿ ಎರಡು ಡಜನ್‌ಗೂ ಹೆಚ್ಚು ವಿಶ್ವ ನಾಯಕರೊಂದಿಗೆ ಬೈಡನ್ ಸಹ ಭಾಗಿಯಾಗಲಿದ್ದಾರೆ.

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಶೃಂಗಸಭೆಯಲ್ಲಿ ಭಾಗವಹಿಸುವ ಸಾಧ್ಯತೆ ಇಲ್ಲ ಎಂದು ಇತ್ತೀಚಿನ ಮಾಧ್ಯಮ ವರದಿಗಳು ತಿಳಿಸಿವೆ.

ಚೀನಾ ಅಧ್ಯಕ್ಷ ಷಿ ಅವರು ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆಯೇ ಎಂದು ಸುದ್ದಿಗಾರರೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಬೈಡನ್, ಜಿನ್‌ಪಿಂಗ್ ಜಿ–20 ಶೃಂಗಸಭೆಯಲ್ಲಿ ಭಾಗವಹಿಸುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದರು.

ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರು ಭಾರತದಲ್ಲಿ ನಡೆಯಲಿರುವ ಜಿ 20 ಶೃಂಗಸಭೆಯಿಂದ ಹೊರಗುಳಿದಿರುವುದನ್ನು ನೋಡಿದರೆ, ಏಷ್ಯಾದ ಕೇಂದ್ರ ಸ್ಥಾನವನ್ನು ಭಾರತಕ್ಕೆ ಬಿಟ್ಟುಕೊಡಲು ಚೀನಾ ಹಿಂಜರಿಯುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಏಷ್ಯಾ ಸೊಸೈಟಿ ಪಾಲಿಸಿ ಇನ್‌ಸ್ಟಿಟ್ಯೂಟ್‌ನ (ಎಎಸ್‌ಪಿಐ) ದಕ್ಷಿಣ ಏಷ್ಯಾ ಇನಿಶಿಯೇಟಿವ್ಸ್‌ನ ನಿರ್ದೇಶಕರಾದ ಫರ್ವಾ ಆಮೆರ್ ಹೇಳಿದ್ದಾರೆ. .

‘ಷಿ ನಡವಳಿಕೆ ಗಮನಿಸಿದರೆ, ಚೀನಾವು ಭಾರತಕ್ಕೆ ಕೇಂದ್ರ ಹಂತವನ್ನು ಬಿಟ್ಟುಕೊಡಲು ಹಿಂಜರಿಯುತ್ತಿದೆ ಎಂದು ಊಹಿಸಬಹುದು. ನೆರೆಹೊರೆಯಲ್ಲಿ ತನ್ನ ಪ್ರಬಲ ಪಾತ್ರ ಮತ್ತು ಪ್ರಭಾವವನ್ನು ಉಳಿಸಿಕೊಳ್ಳುವ ಚೀನಾದ ಉದ್ದೇಶವನ್ನು ಒತ್ತಿಹೇಳುತ್ತದೆ’ ಎಂದೂ ಅವರು ಹೇಳಿದ್ದಾರೆ.

ಎರಡನೆಯದಾಗಿ, ಜಿ–20ಗೆ ಷಿ ಅನುಪಸ್ಥಿತಿಯು ಗಡಿಯಲ್ಲಿ ಉದ್ವಿಗ್ನತೆ ಕಡಿಮೆ ಮಾಡಲು ನಿರಂತರ ಮತ್ತು ಸಂಕೀರ್ಣವಾದ ರಾಜತಾಂತ್ರಿಕ ಪ್ರಯತ್ನಗಳ ಅಗತ್ಯವಿರುತ್ತದೆ ಎಂಬುದನ್ನು ತೋರಿಸುತ್ತದೆ. ಸಂಧಾನ ಪ್ರಕ್ರಿಯೆಯು ವಿಳಂಬವಾಗಬಹುದು ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT