ವಾಷಿಂಗ್ಟನ್: ಭಾರತದ ನಾಯಕತ್ವ ಹಾಗೂ ಲಸಿಕೆ ಉತ್ಪಾದನಾ ಸಾಮರ್ಥ್ಯವನ್ನು ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಪ್ರಶಂಸಿಸಿದ್ದಾರೆ.

ಭಾರತದ ಪ್ರಧಾನಿ ಕಾರ್ಯಾಲಯದ ಅಧಿಕೃತ ಟ್ವಿಟರ್ ಖಾತೆಯನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿರುವ ಅವರು, ‘ವೈಜ್ಞಾನಿಕ ಆವಿಷ್ಕಾರಗಳಲ್ಲಿ ಭಾರತದ ನಾಯಕತ್ವ ಅದ್ಭುತವಾಗಿದೆ. ಇಡೀ ವಿಶ್ವವು ಕೋವಿಡ್–19 ಸಾಂಕ್ರಾಮಿಕವನ್ನು ಕೊನೆಗೊಳಿಸಬೇಕೆಂದು ಕಾರ್ಯನಿರ್ವಹಿಸುತ್ತಿರುವ ಈ ಸಂದರ್ಭದಲ್ಲಿ ಭಾರತದ ಲಸಿಕೆ ಉತ್ಪಾದನಾ ಸಾಮರ್ಥ್ಯವೂ ಉತ್ತಮವಾದದ್ದಾಗಿದೆ’ ಎಂದು ಉಲ್ಲೇಖಿಸಿದ್ದಾರೆ.

ಆಕ್ಸ್‌ಫರ್ಡ್ ಯುನಿವರ್ಸಿಟಿ ಹಾಗೂ ಅಸ್ಟ್ರಾಜೆನೆಕಾ ಸಂಸ್ಥೆಗಳು ಕೋವಿಡ್–19ಗೆ ಅಭಿವೃದ್ಧಿಪಡಿಸಿದ ‘ಕೋವಿಶೀಲ್ಡ್’ ಲಸಿಕೆಯ ತುರ್ತು ಬಳಕೆಗೆ ಭಾರತದಲ್ಲಿ ಈಗಾಗಲೇ ಅನುಮೋದನೆ ನೀಡಲಾಗಿದೆ. ಜತೆಗೆ, ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ‘ಕೋವಾಕ್ಸಿನ್’ ಲಸಿಕೆ ತುರ್ತು ಬಳಕೆಗೂ ಅನುಮೋದನೆ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.