ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸಿಯಾ ಬೀಬಿ ಬಿಡುಗಡೆ ಎತ್ತಿ ಹಿಡಿದ ‘ಸುಪ್ರೀಂ’

ಧರ್ಮನಿಂದನೆ ಪ್ರಕರಣ: ಮೇಲ್ಮನವಿ ವಜಾಗೊಳಿಸಿದ ನ್ಯಾಯಾಲಯ
Last Updated 29 ಜನವರಿ 2019, 20:30 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ಧರ್ಮನಿಂದನೆ ಆರೋಪದಿಂದ ಕ್ರೈಸ್ತ ಮಹಿಳೆ ಆಸಿಯಾ ಬೀಬಿ ಖುಲಾಸೆಗೊಂಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಪುನರ್‌ ಪರಿಶೀಲನಾ ಅರ್ಜಿಯನ್ನು ಪಾಕಿಸ್ತಾನ ಸುಪ್ರೀಂಕೋರ್ಟ್‌ ಮಂಗಳವಾರ ವಜಾ ಮಾಡಿದೆ.

ವಿಚಾರಣಾ ನ್ಯಾಯಾಲಯ 2010ರಲ್ಲಿ ಆಸಿಯಾ ಬೀಬಿ ದೋಷಿ ಎಂದು ತೀರ್ಪು ನೀಡಿತ್ತು. ಲಾಹೋರ್‌ ಹೈಕೋರ್ಟ್‌ ಸಹ ಆಸಿಯಾ ಬೀಬಿಗೆ ನೀಡಿದ್ದ ಗಲ್ಲು ಶಿಕ್ಷೆಯನ್ನು ಎತ್ತಿ ಹಿಡಿದಿತ್ತು. ಕಳೆದ ವರ್ಷ ಸುಪ್ರೀಂಕೋರ್ಟ್‌ ಆಸಿಯಾ ಬೀಬಿಗೆ ನೀಡಿದ್ದ ಶಿಕ್ಷೆಯನ್ನು ರದ್ದುಪಡಿಸಿ ಬಿಡುಗಡೆಗೊಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT