ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಬೂಲ್‌ನ ರಷ್ಯಾ ರಾಯಭಾರ ಕಚೇರಿಯಲ್ಲಿ ಸ್ಫೋಟ: ಮೂರು ಸಾವು

Last Updated 5 ಸೆಪ್ಟೆಂಬರ್ 2022, 11:34 IST
ಅಕ್ಷರ ಗಾತ್ರ

ಕಾಬೂಲ್‌: ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ರಷ್ಯಾ ರಾಯಭಾರ ಕಚೇರಿಯ ಹೊರಭಾಗದಲ್ಲಿ ಸೋಮವಾರ ಸ್ಫೋಟ ಸಂಭವಿಸಿದ್ದು, ರಾಯಭಾರ ಕಚೇರಿಯ ಇಬ್ಬರು ಸಿಬ್ಬಂದಿ ಹಾಗೂ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ.

ಸ್ಫೋಟದಲ್ಲಿ ಎಂಟರಿಂದ 10 ಮಂದಿ ಮೃತಪಟ್ಟಿದ್ದಾರೆ ಎಂಬ ವರದಿಗಳೂ ಬರುತ್ತಿವೆ. ಹೀಗಾಗಿ ಮೃತರ ಸಂಖ್ಯೆಯಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ ಎಂದು ರಷ್ಯಾದ ಸರ್ಕಾರಿ ಸ್ವಾಮ್ಯದ ರಿಯಾ ನೊವೋಸ್ತಿ ಸುದ್ದಿಸಂಸ್ಥೆ ತಿಳಿಸಿದೆ.

ರಾಯಭಾರ ಕಚೇರಿಯ ಹೊರಗಡೆ ವೀಸಾಕ್ಕಾಗಿ ಸರದಿಯಲ್ಲಿ ನಿಂತಿದ್ದವರನ್ನು ಕರೆಯಲು ರಷ್ಯಾದ ರಾಜತಾಂತ್ರಿಕ ಸಿಬ್ಬಂದಿಯೊಬ್ಬರು ಹೊರಬರುತ್ತಿದ್ದಂತೆಯೇ ಸ್ಫೋಟ ಸಂಭವಿಸಿತು. ಘಟನೆಯಲ್ಲಿ ಒಬ್ಬರು ನಾಗರಿಕರು ಮೃತಪಟ್ಟಿದ್ದಾರೆ, ಇತರ 10 ಮಂದಿಗೆ ಗಾಯವಾಗಿದೆ ಎಂದು ಕಾಬೂಲ್‌ ಪೊಲಿಸ್ ಮುಖ್ಯಸ್ಥರ ವಕ್ತಾರ ಖಾಲಿದ್ ಜದ್ರಾನ್‌ ತಿಳಿಸಿದ್ದಾರೆ.

ಇದೊಂದು ಆತ್ಮಾಹುತಿ ದಾಳಿ ಆಗಿರಬೇಕು ಎಂದು ಶಂಕಿಸಲಾಗಿದೆ. ಸದ್ಯ ಯಾವೊಂದು ಸಂಘಟನೆಯೂ ಸ್ಫೋಟದ ಹೊಣೆ ಹೊತ್ತುಕೊಂಡಿಲ್ಲ. ಈಚಿನ ದಿನಗಳಲ್ಲಿ ಇಸ್ಲಾಮಿಕ್ ಸ್ಟೇಟ್‌ (ಐಎಸ್‌) ಸ್ಥಳೀಯ ಘಟಕ ನಾಗರಿಕರು ಮತ್ತು ತಾಲಿಬಾನಿಗಳನ್ನು ಗುರಿಯಾಗಿಟ್ಟುಕೊಂಡು ಹಿಂಸಾತ್ಮಕ ದಾಳಿ ತೀವ್ರಗೊಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT