ಶನಿವಾರ, 21 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪಾಕಿಸ್ತಾನದಲ್ಲಿ ರಾಜಕೀಯ ಪಕ್ಷವೊಂದರ ಸಭೆಯಲ್ಲಿ ಬಾಂಬ್ ಸ್ಫೋಟ: 40 ಜನ ಸಾವು

ಖೈಬರ್ ಪಖ್ತುಂಖ್ವಾ ಎಂಬಲ್ಲಿ ಘಟನೆ
Published : 30 ಜುಲೈ 2023, 13:37 IST
Last Updated : 30 ಜುಲೈ 2023, 13:37 IST
ಫಾಲೋ ಮಾಡಿ
Comments

ಪೇಶಾವರ: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಎಂಬಲ್ಲಿ ಇಸ್ಲಾಮಿಕ್ ರಾಜಕೀಯ ಪಕ್ಷದ ಸಭೆ ನಡೆಯುತ್ತಿದ್ದ ವೇಳೆ ಸ್ಫೋಟ ಸಂಭವಿಸಿದ ಪರಿಣಾಮ 40 ಜನರು ಮೃತಪಟ್ಟಿದ್ದು, 50 ಮಂದಿ ಗಾಯಗೊಂಡಿದ್ದಾರೆ.

ಇಲ್ಲಿನ ಬಜೌರ್‌ನ ಖಾರ್‌ನಲ್ಲಿ ಜಮಿಯತ್ ಉಲೇಮಾ-ಎ-ಇಸ್ಲಾಂ-ಫಜಲ್ (ಜೆಯುಐ-ಎಫ್) ಕಾರ್ಯಕರ್ತರ ಸಮಾವೇಶದಲ್ಲಿ ಬಾಂಬ್‌ ಸ್ಫೋಟ ಸಂಭವಿಸಿದೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ.

ಸ್ಫೋಟದಲ್ಲಿ ಗಾಯಗೊಂಡಿರುವ ಜನರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸ್ಥಳದಲ್ಲಿ ಪೊಲೀಸರು ಹಾಗೂ ಆಂಬ್ಯುಲೆನ್ಸ್ ಬೀಡು ಬಿಟ್ಟಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು 1122 ರಕ್ಷಣಾ ತಂಡದ ವಕ್ತಾರ ಬಿಲಾಲ್ ಫೈಜಿ ಸುದ್ದಿ ಪತ್ರಿಕೆ ಡ್ವಾನ್‌ಗೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT