ವಾಷಿಂಗ್ಟನ್: ಭಾರತಕ್ಕೆ ಕಳುಹಿಸಿಕೊಡಲು ಲಕ್ಷಾಂತರ ಡೋಸ್ ಕೋವಿಡ್ ಲಸಿಕೆಗಳು ಸಿದ್ಧವಾಗಿವೆ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕೆನ್ ಹೇಳಿದ್ದಾರೆ. ಭಾರತ ಭೇಟಿಗೆ ಕೆಲವೇ ದಿನಗಳಿರುವಾಗ ಅವರು ಈ ಹೇಳಿಕೆ ನೀಡಿದ್ದಾರೆ.

‘ಲಕ್ಷಾಂತರ ಡೋಸ್ ಲಸಿಕೆಗಳು ಭಾರತಕ್ಕೆ ಕಳುಹಿಸಲು ಸಿದ್ಧವಿವೆ. ಭಾರತ ಸರ್ಕಾರವು ಕಾನೂನು ಪ್ರಕ್ರಿಯೆಗಳನ್ನು ಪೂರೈಸಿದ ಕೂಡಲೇ ಕಳುಹಿಸಿಕೊಡಲಾಗುವುದು’ ಎಂದು ‘ಎಂಎಸ್‌ಎನ್‌ಬಿಸಿ ನ್ಯೂಸ್’ಗೆ ನೀಡಿದ ಸಂದರ್ಶನದಲ್ಲಿ ಅವರು ತಿಳಿಸಿದ್ದಾರೆ.

ಅಮೆರಿಕವು ಈಗಾಲೇ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಭಾರತದ ಇತರ ನೆರೆ ರಾಷ್ಟ್ರಗಳಿಗೆ ಲಸಿಕೆಗಳನ್ನು ಕಳುಹಿಸುವ ಪ್ರಕ್ರಿಯೆ ಆರಂಭಿಸಿದೆ ಎಂದೂ ಅವರು ತಿಳಿಸಿದ್ದಾರೆ.

ಓದಿ:ಇದೇ 27ರಿಂದ ಅಮೆರಿಕ ರಕ್ಷಣಾ ಕಾರ್ಯದರ್ಶಿಯ ಭಾರತ ಪ್ರವಾಸ

ಭಾರತವು ಇನ್ನಷ್ಟೇ ನಿರ್ಧಾರ ಕೈಗೊಳ್ಳಬೇಕಿರುವುದರಿಂದ ಅಮರಿಕದಿಂದ ಭಾರತಕ್ಕೆ ಈವರೆಗೆ ಲಸಿಕೆ ಪೂರೈಕೆಯಾಗಿಲ್ಲ. ಅಮೆರಿಕದ ಮೊಡೆರ್ನಾ, ಫೈಜರ್, ಜಾನ್ಸನ್ ಆಂಡ್ ಜಾನ್ಸನ್ ಲಸಿಕೆಗಳಿಗೆ ಅನುಮೋದನೆ ನೀಡುವಂತೆ ಜೋ ಬೈಡನ್ ಆಡಳಿತವು ಭಾರತ ಸರ್ಕಾರವನ್ನು ಕೇಳಿಕೊಂಡಿದೆ.

ಆ್ಯಂಟನಿ ಬ್ಲಿಂಕೆನ್ ಅವರು ಜುಲೈ 27ರಿಂದ ಭಾರತ ಪ್ರವಾಸ ಆರಂಭಿಸಲಿದ್ದಾರೆ. ಭಾರತಕ್ಕೆ ಇದು ಬ್ಲಿಂಕೆನ್ ಅವರ ಮೊದಲ ಭೇಟಿಯಾಗಿದೆ. ಈ ಪ್ರವಾಸದ ಸಮಯದಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ಸಚಿವ ಎಸ್.ಜೈಶಂಕರ್ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೋಭಾಲ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.