ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಜಾ ಕದನ ವಿರಾಮ | ಬ್ಲಿಂಕೆನ್ ಸೌದಿ ಅರೇಬಿಯಾ ಭೇಟಿ ನಾಳೆ

Published 28 ಏಪ್ರಿಲ್ 2024, 2:55 IST
Last Updated 28 ಏಪ್ರಿಲ್ 2024, 2:55 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಗಾಜಾದಲ್ಲಿ ಕದನ ವಿರಾಮದ ಪ್ರಗತಿಯ ಬಗ್ಗೆ ಚರ್ಚಿಸಲು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆ್ಯಂಟೊನಿ ಬ್ಲಿಂಕೆನ್‌ ನಾಳೆ(ಏ.29) ಸೌದಿ ಅರೇಬಿಯಾಕ್ಕೆ ಭೇಟಿ ನೀಡಲಿದ್ದಾರೆ ಎಂದು ಅಮೆರಿಕದ ವಿದೇಶಾಂಗ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಇಸ್ರೇಲ್-ಹಮಾಸ್ ಯುದ್ಧ ಪ್ರಾರಂಭವಾದ ನಂತರ ರಾಜತಾಂತ್ರಿಕ ಕೆಲಸಗಳಿಗಾಗಿ ಮಧ್ಯಪ್ರಾಚ್ಯಕ್ಕೆ ಬ್ಲಿಂಕೆನ್ ಏಳನೇ ಬಾರಿ ಭೇಟಿ ನೀಡುತ್ತಿದ್ದಾರೆ ಎಂದು ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಿದೆ.

ಬ್ಲಿಂಕನ್ ಸೋಮವಾರ(ಏ.29) ಸೌದಿ ಅರೇಬಿಯಾಕ್ಕೆ ಪ್ರಯಾಣಿಸುತ್ತಿದ್ದು, ಸೌದಿ ರಾಜಧಾನಿ ರಿಯಾದ್‌ನಲ್ಲಿ ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಅರಬ್ ವಿದೇಶಾಂಗ ಮಂತ್ರಿಯನ್ನೂ ಭೇಟಿಯಾಗಲಿದ್ದಾರೆ ಎಂದು ಹೇಳಿದೆ.

ಗಾಜಾದಲ್ಲಿ ಮಾನವೀಯ ನೆರವಿನ ಹೆಚ್ಚಳ, ಒತ್ತೆಯಾಳುಗಳ ಬಿಡುಗಡೆ ಮತ್ತು ಯುದ್ಧ ‍ಪೀಡಿತ ಪ್ರದೇಶದಲ್ಲಿ ಶಾಶ್ವತ ಶಾಂತಿ ಮತ್ತು ಭಧ್ರತೆ ಸಾಧಿಸುವ ಕುರಿತು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ

ಸೌದಿ ಭೇಟಿಯ ನಂತರ ಬ್ಲಿಂಕನ್‌ ಇಸ್ರೇಲ್‌ಗೆ ಭೇಟಿ ನೀಡಲಿದ್ದಾರೆ ಎಂದು ಇಸ್ರೇಲಿ ವಿದೇಶಾಂಗ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT