ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Bangla unrest: ಅವಾಮಿ ಲೀಗ್‌ ಪಕ್ಷದ 29 ನಾಯಕರ, ಕುಟುಂಬ ಸದಸ್ಯರ ಮೃತದೇಹ ಪತ್ತೆ

Published : 7 ಆಗಸ್ಟ್ 2024, 6:14 IST
Last Updated : 7 ಆಗಸ್ಟ್ 2024, 6:14 IST
ಫಾಲೋ ಮಾಡಿ
Comments

ಢಾಕಾ: ಹಿಂಸಾಚಾರ ಪೀಡಿತ ಬಾಂಗ್ಲಾದೇಶದಲ್ಲಿ ದೇಶ ತೊರೆದ ಮಾಜಿ ಪ್ರಧಾನಿ ಶೇಖ್‌ ಹಸೀನಾ ಅವರ ಪಕ್ಷ ಅವಾಮಿ ಲೀಗ್‌ನ 29 ನಾಯಕರು ಮತ್ತು ಅವರ ಕುಟುಂಬ ಸದಸ್ಯರ ಮೃತದೇಹಗಳು ಪತ್ತೆಯಾಗಿದೆ. 

ಈ ಕುರಿತು ದಿ ಢಾಕಾ ಟ್ರಿಬ್ಯೂನ್‌ ಸುದ್ದಿ ಸಂಸ್ಥೆ ವರದಿ ತಿಳಿಸಿದೆ.

ಹಸೀನಾ ಅವರು ದೇಶ ತೊರೆದ ಬಳಿಕ ಅವಾಮಿ ಲೀಗ್ ನಾಯಕರಿಗೆ ಸೇರಿದ ಮನೆ ಮತ್ತು ವ್ಯಾಪಾರ ಸಂಸ್ಥೆಗಳ ಮೇಲೆ ಪ್ರತಿಭಟನಕಾರರು ದಾಳಿ ನಡೆಸಿ ಧ್ವಂಸಗೊಳಿಸಿದ್ದಾರೆ. ಬಳಿಕ ಅಲ್ಲಿರುವ ವಸ್ತುಗಳನ್ನು ಲೂಟಿ ಮಾಡಿದ್ದಾರೆ.

ಮಾಜಿ ಕೌನ್ಸಿಲರ್ ಮೊಹಮ್ಮದ್ ಶಾ ಆಲಂ ಅವರ ಮೂರು ಅಂತಸ್ತಿನ ಮನೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಪರಿಣಾಮ ಹದಿ ಹರೆಯದ ಮಕ್ಕಳು ಸೇರಿ 11 ಮಂದಿ ಮೃತಪಟ್ಟಿದ್ದರು ‌‌‌‌‌‌‌‌‌ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT