ಲಾಸ್ ಏಂಜಲೀಸ್: ಡೆಲ್ಟಾ ಏರ್ಲೈನ್ಸ್ ವಿಮಾನಯಾನ ಸಂಸ್ಥೆಗೆ ಸೇರಿದ ಬೋಯಿಂಗ್ 767 ವಿಮಾನದ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ಈ ಘಟನೆ ಶುಕ್ರವಾರ ರಾತ್ರಿ ನಡೆದಿದೆ ಎಂದು ವಿಮಾನಯಾನ ಕಂಪನಿಯ ಅಧಿಕಾರಿಗಳು ಹೇಳಿದ್ದಾರೆ. ಇದು ಅಟ್ಲಾಂಟಾಗೆ ತೆರಳುತ್ತಿದ್ದು ಇದರಲ್ಲಿ ಸಿಬ್ಬಂದಿ ಸೇರಿ 200ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಎಲ್ಲರೂ ಸುರಕ್ಷಿತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನ ಆಗಸದಲ್ಲಿ ಹಾರುತ್ತಿರುವಾಗ ಎಡ ಎಂಜಿನ್ನಲ್ಲಿ ಬೆಂಕಿಯ ಜ್ವಾಲೆಗಳು ಕಾಣುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿವೆ. ಈ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

24 ವರ್ಷ ಹಳೆಯ ಬೋಯಿಂಗ್–767 ವಿಮಾನದ ಎಂಜಿನಲ್ಲಿ ಬೆಂಕಿ ಕಾಣಿಸಿಕೊಂಡಿರವುದನ್ನು ಗಮನಿಸಿದ ಪೈಲಟ್ಗಳು ತಕ್ಷಣವೇ ತುರ್ತು ಪರಿಸ್ಥಿತಿ ಘೋಷಿಸಿದರು. ವಿಮಾನ ವಾಪಸಾತಿಗಾಗಿ ವಾಯು ಸಂಚಾರ ನಿಯಂತ್ರಣ (ATC)ದೊಂದಿಗೆ ಸಮನ್ವಯ ಸಾಧಿಸಿದರು. ಕೆಲ ನಿಮಿಷಗಳ ಕಾಲ ವಿಮಾನ ಪೆಸಿಫಿಕ್ ಮಹಾಸಾಗರದ ಮೇಲೆ ಹಾರಾಡಿದ ಬಳಿಕ ತುರ್ತು ಭೂಸ್ಪರ್ಶ ಮಾಡಿತು. ಕೂಡಲೇ ಅಗ್ನಿಶಾಮಕ ಹಾಗೂ ತುರ್ತು ಸಿಬ್ಬಂದಿ ಬೆಂಕಿ ನಂದಿಸಿದರು ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.