ಕ್ವೆಟ್ಟಾ: ಪಾಕಿಸ್ತಾನದ ಕ್ವೆಟ್ಟಾದಲ್ಲಿರುವ ಹಜಾರಿಗಂಜ್ ತರಕಾರಿ ಮಾರುಕಟ್ಟೆಯಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟದಲ್ಲಿ16 ಮಂದಿ ಸಾವಿಗೀಡಾಗಿದ್ದು, 24 ಮಂದಿಗೆ ಗಾಯಗಳಾಗಿವೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ.

ಹಜಾರಾ ಸಮುದಾಯದವರನ್ನು ಗುರಿಯಾಗಿರಿಸಿ ಈ ದಾಳಿ ನಡೆದಿದೆ ಎಂದು ಡಿಐಜಿ ಅಬ್ದುಲ್ ರಜಾಕ್ ಚೀಮಾ ಹೇಳಿರುವುದಾಗಿ ಡಾನ್ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಆಲೂಗಡ್ಡೆ ಗೋಣಿ ಚೀಲದಲ್ಲಿ ಎಲ್‍ಇಡಿ ಅಡಗಿಸಿಟ್ಟು ಸ್ಫೋಟಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಡಿಐಜಿ ಚೀಮಾ ಹೇಳಿದ್ದಾರೆ.ಕ್ವೆಟ್ಟಾ ದಾಳಿಯಲ್ಲಿ ಸಾವಿಗೀಡಾದವರಲ್ಲಿ 7 ಮಂದಿ ಹಜಾರಾ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ಸ್ಫೋಟದ ತೀವ್ರತೆಗೆಹತ್ತಿರದ ಕಟ್ಟಡಗಳಿಗೂ ಹಾನಿಯಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಜಿಯೊ ನ್ಯೂಸ್ ವರದಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.