ರಿಯೊ ಡಿ ಜನೈರೊ: ಬ್ರೆಜಿಲ್‌ನ ಪೆಟ್ರೊಪೊಲಿಸ್ ನಗರದಲ್ಲಿ ಸುರಿದ ಭಾರಿ ಮಳೆಯಿಂದ ಉಂಟಾದ ಪ್ರವಾಹ, ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 165ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪೆಟ್ರೊಪೊಲಿಸ್‌ನಲ್ಲಿ ಉಂಟಾದ ಪ್ರವಾಹದಲ್ಲಿ ಸಿಲುಕಿರುವ ತಮ್ಮ ಸಂಬಂಧಿಕರಿಗಾಗಿ ಸ್ಥಳೀಯರು ಹುಡುಕಾಟ ನಡೆಸಿದ್ದಾರೆ. ಅಲ್ಲದೆ ರಕ್ಷಣಾ ಸಿಬ್ಬಂದಿಯೂ ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಭೂಕುಸಿತ, ಪ್ರವಾಹದಿಂದ ಉಂಟಾದ ಸಾವು–ನೋವುಗಳನ್ನು ನೋಡಿ ಇದೊಂದು ಯುದ್ಧದ ರೀತಿಯಲ್ಲಿತ್ತು ಎಂದು ಅಧ್ಯಕ್ಷ ಜೈರ್ ಬೋಲ್ಸನಾರೊ ಹೇಳಿದರು.

ಸಂಖ್ಯೆ ಬಗ್ಗೆ ಸ್ಪಷ್ಟತೆ ಇಲ್ಲ.ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ. ಅವಶೇಷಗಳಡಿ ಸಿಲುಕಿದವರು ಬದುಕುಳಿದಿರುವ ಸಾಧ್ಯತೆ ಕಡಿಮೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ.ದುರಂತದಲ್ಲಿ ಕನಿಷ್ಠ 28 ಮಕ್ಕಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.