ಶನಿವಾರ, 7 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಾಂಗ್ಲಾ ದಂಗೆ: ಭಾರತದ ಬಾಂಗ್ಲಾ ಗಡಿಯಲ್ಲಿ ಹೈಅಲರ್ಟ್ ಘೋಷಿಸಿದ ಬಿಎಸ್‌ಎಫ್

Published 5 ಆಗಸ್ಟ್ 2024, 11:48 IST
Last Updated 5 ಆಗಸ್ಟ್ 2024, 11:48 IST
ಅಕ್ಷರ ಗಾತ್ರ

ನವದೆಹಲಿ: ಬಾಂಗ್ಲಾದೇಶದಲ್ಲಿ ಕ್ಷಿಪ್ರ ದಂಗೆ ಹಿನ್ನೆಲೆಯಲ್ಲಿ 4,096 ಕಿ.ಮೀ ಉದ್ದದ ಭಾರತ-ಬಾಂಗ್ಲಾದೇಶ ಗಡಿಯುದ್ದಕ್ಕೂ ಗಡಿ ಭದ್ರತಾ ಪಡೆಯು(ಬಿಎಸ್‌ಎಫ್) ಹೈ ಅಲರ್ಟ್ ಘೋಷಿಸಿದೆ.

ಪರಿಸ್ಥಿತಿ ಕುರಿತಂತೆ ಅವಲೋಕನ ನಡೆಸಲು ಬಿಎಸ್‌ಎಫ್ ಡಿಜಿ ದಲ್ಜಿತ್ ಸಿಂಗ್ ಚೌಧರಿ ಮತ್ತು ಇತರೆ ಹಿರಿಯ ಅಧಿಕಾರಿಗಳು ಕೋಲ್ಕತ್ತಗೆ ಬಂದಿದ್ದಾರೆ ಎಂದು ಬಿಎಸ್‌ಎಫ್ ತಿಳಿಸಿದೆ.

ಎಲ್ಲ ಸಿಬ್ಬಂದಿಯನ್ನು ಕೂಡಲೇ ಗಡಿ ಭದ್ರತೆಗೆ ನಿಯೋಜಿಸುವಂತೆ ಎಲ್ಲ ಫೀಲ್ಡ್ ಕಮಾಂಡರ್‌ಗಳಿಗೆ ಡಿಜಿ ನಿರ್ದೇಶನ ನೀಡಿದ್ದಾರೆ.

ಬಾಂಗ್ಲಾದೇಶದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾದಾಗಿನಿಂದ ಬಾಂಗ್ಲಾ ಗಡಿಯಲ್ಲಿ ನಿಯೋಜನೆಗೊಂಡಿರುವ ಎಲ್ಲ ಸಿಬ್ಬಂದಿಯ ರಜೆಗಳನ್ನು ರದ್ದು ಮಾಡಲಾಗಿದ್ದು, ಈಗ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಈಶಾನ್ಯ ಭಾರತದ ಐದು ರಾಜ್ಯಗಳು ಬಾಂಗ್ಲಾದೇಶದ ಜೊತೆ ಗಡಿ ಹಂಚಿಕೊಂಡಿವೆ.

ಈ ಪೈಕಿ ಪಶ್ಚಿಮ ಬಂಗಾಳದ ಗಡಿ 2,217 ಕಿ.ಮೀ ಇದೆ. ತ್ರಿಪುರಾ(856 ಕಿ.ಮೀ), ಮೇಘಾಲಯ (443 ಕಿ.ಮೀ), ಅಸ್ಸಾಂ (262 ಕಿ.ಮೀ) ಮತ್ತು ಮಿಜೋರಾಂ (318 ಕಿ.ಮೀ) ಗಡಿ ಹಂಚಿಕೊಂಡಿವೆ.

ದೇಶದಲ್ಲಿ ಉದ್ವಿಗ್ನ ವಾತಾವರಣ ಮತ್ತು ತಮ್ಮ ಮನೆಗೆ ಪ್ರತಿಭಟನಾಕಾರರು ನುಗ್ಗಿದ ಹಿನ್ನೆಲೆಯಲ್ಲಿ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿ ದೇಶ ತೊರೆದಿದ್ದಾರೆ.

ಪ್ರತಿಭಟನಾಕಾರರು ಮತ್ತು ಅವಾಮಿ ಲೀಗ್ ಕಾರ್ಯಕರ್ತರ ನಡುವಿನ ಘರ್ಷಣೆಯಲ್ಲಿ ಪೊಲೀಸರು ಸೇರಿದಂತೆ 106 ಮಂದಿ ಮೃತಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT