ಮಂಗಳವಾರ, 8 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹೈಸ್ಕೂಲ್‌ನ ತರಗತಿಯಲ್ಲಿ ಸಹಪಾಠಿಯನ್ನು ಮಾರಣಾಂತಿಕವಾಗಿ ಇರಿದ ವಿದ್ಯಾರ್ಥಿ

Published : 2 ಮಾರ್ಚ್ 2023, 2:51 IST
ಫಾಲೋ ಮಾಡಿ
Comments

ಕ್ಯಾಲಿಫೋರ್ನಿಯಾ: ತರಗತಿಯಲ್ಲಿ ಸ್ನೇಹಿತರು ಜಗಳವಾಡಿದ್ದಾರೆ. ಈ ಸಂದರ್ಭದಲ್ಲಿ 16 ವರ್ಷದ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಯನ್ನು ಮಾರಣಾಂತಿಕವಾಗಿ ಚಾಕುವಿನಿಂದ ಇರಿದಿರುವ ಘಟನೆ ಉತ್ತರ ಕ್ಯಾಲಿಫೋರ್ನಿಯಾದ ಹೈಸ್ಕೂಲ್‌ನಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಲ್ಲಿನ ಮಾಂಟ್ಗೊಮೆರಿ ಹೈಸ್ಕೂಲ್‌ನಲ್ಲಿ ಈ ದುರ್ಘಟನೆ ನಡೆದಿದೆ. ಕಲಾ ತರಗತಿ ನಡೆಯುವ ವೇಳೆ ಇಬ್ಬರು ಹೊಸ ವಿದ್ಯಾರ್ಥಿಗಳೊಂದಿಗೆ 16 ವರ್ಷದ ವಿದ್ಯಾರ್ಥಿ ಜಗಳವಾಡಿದ್ದಾನೆ. ಆರಂಭದಲ್ಲಿ ಶಿಕ್ಷಕರು ಜಗಳ ಬಿಡಿಸುವ ಪ್ರಯತ್ನ ಮಾಡಿದರಾದರೂ ವಿದ್ಯಾರ್ಥಿ ಚಾಕು ತೆಗೆದು ಇರಿದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಜಗಳದ ವೇಳೆ ಮತ್ತೊಬ್ಬ ವಿದ್ಯಾರ್ಥಿ ಗಾಯಗೊಂಡಿದ್ದು, ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಒಬ್ಬ ವಿದ್ಯಾರ್ಥಿ ಮಾರಣಾಂತಿಕವಾಗಿ ಇರಿದಿದ್ದರಿಂದ ಮೃತಪಟ್ಟಿದ್ದಾರೆ. ಇನ್ನೊಬ್ಬ ವಿದ್ಯಾರ್ಥಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಂಕಿತ 15 ವರ್ಷದ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ ಎಂದು ಸಾಂಟಾ ರೋಸಾ ಪೊಲೀಸರು ಮಾಹಿತಿ ನೀಡಿದ್ದಾರೆ.

ಯಾವ ವಿಷಯಕ್ಕೆ ಮೂವರ ನಡುವೆ ಜಗಳ ನಡೆದಿದೆ ಎಂದು ತಕ್ಷಣಕ್ಕೆ ತಿಳಿದು ಬಂದಿಲ್ಲ. ಪೊಲೀಸರು ವಿದ್ಯಾರ್ಥಿಗಳ ಹೆಸರನ್ನೂ ಸಹ ಬಹಿರಂಗಪಡಿಸಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT