ಪೆಶಾವರ: ಪ್ರಕ್ಷುಬ್ಧ ಸ್ಥಿತಿ ಇರುವ ವಾಯವ್ಯ ಪಾಕಿಸ್ತಾನದಲ್ಲಿ ಬುಧವಾರ ಪೊಲೀಸ್ ವಾಹನದ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಮಗುವೊಂದು ಮೃತಪಟ್ಟಿದೆ ಎಂದು ಪೊಲೀಸರು ತಿಳಿಸಿದರು.
‘ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಟ್ಯಾಂಕ್ ಜಿಲ್ಲೆಯಲ್ಲಿ ಠಾಣಾಧಿಕಾರಿ ವಾಹನದ ಮೇಲೆ ಉಗ್ರರು ದಾಳಿ ನಡೆಸಿದ್ದು, ಗುಂಡಿನ ಚಕಮಕಿಯಲ್ಲಿ ಮಗುವೊಂದು ಮೃತಪಟ್ಟಿದೆ ಮತ್ತು ದಾರಿಹೋಕನಿಗೆ ಗಾಯವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಪೊಲೀಸರ ಪ್ರತಿದಾಳಿಗೆ ಶಸ್ತ್ರಸಜ್ಜಿತ ಉಗ್ರನೊಬ್ಬ ಮೃತಪಟ್ಟಿದ್ದು, ಘಟನಾ ಸ್ಥಳದಿಂದ ನಾಪತ್ತೆಯಾದ ಇತರ ಉಗ್ರರ ಪತ್ತೆಗಾಗಿ ಪೊಲೀಸರು ಕಾರ್ಯಚರಣೆ ನಡೆಸುತ್ತಿದ್ದಾರೆ ಎಂದು ಅಧಿಕಾರಿ ಹೇಳಿದರು.