ಬೀಜಿಂಗ್: ‘ಗಡಿಯಲ್ಲಿ ಉದ್ಭವಿಸಿರುವ ಪ್ರಕ್ಷುಬ್ಧ ಸ್ಥಿತಿಯನ್ನು ಶಮನಗೊಳಿಸುವನಿಟ್ಟಿನಲ್ಲಿ ಉಭಯ ದೇಶಗಳ ಸೇನಾಪಡೆಗಳು ಗಡಿಯಿಂದ ಹಿಂದೆ ಸರಿಯಲು ಕಾರ್ಯಪ್ರವೃತ್ತವಾಗಿವೆ’ ಎಂದು ಚೀನಾ ಬುಧವಾರ ಹೇಳಿದೆ.

‘ಗಡಿ ವಿವಾದ ಕುರಿತಂತೆ ಇತ್ತೀಚೆಗೆ ಎರಡೂ ದೇಶಗಳ ರಾಜತಾಂತ್ರಿಕ ಮತ್ತು ಸೇನಾಪಡೆಗಳ ಅಧಿಕಾರಿಗಳ ನಡುವಿನ ಮಾತುಕತೆ ಫಲಪ್ರದವಾಗಿದ್ದು, ಸೇನಾಪಡೆಗಳು ಗಡಿಯಿಂದ ಹಿಂದಕ್ಕೆ ಸರಿಯುವ ಕಾರ್ಯಕ್ಕೆ ಚಾಲನೆ ನೀಡಿವೆ’ ಎಂದು ವಿದೇಶಾಂಗ ಸಚಿವಾಲಯದ ವಕ್ತಾರರಾದ ಹುವಾ ಚುನ್ಯಿಂಗ್ ತಿಳಿಸಿದರು.

ಪೂರ್ವ ಲಡಾಖ್ನ ವಾಸ್ತವ ಗಡಿ ರೇಖೆಯ (ಎಲ್ಎಸಿ) ಮೂರು ಸ್ಥಳಗಳಿಂದ ಯೋಧರನ್ನುಹಿಂದಕ್ಕೆಕರೆಸಿಕೊಳ್ಳುವ ಸಂಬಂಧ ಎರಡೂ ದೇಶಗಳ ಸೇನೆಯ ಅಧಿಕಾರಿಗಳ ನಡುವೆ ಜೂನ್ 6ರಂದು ನಡೆದ ಸಭೆಯಲ್ಲಿ ಒಮ್ಮತಕ್ಕೆ ಬರಲಾಗಿದೆ ಎಂಬ ಭಾರತದ ವಿದೇಶಾಂಗ ಸಚಿವಾಲಯ ಹೇಳಿಕೆ ನೀಡಿದ ಬೆನ್ನಲ್ಲೇ ಚುನ್ಯಿಂಗ್ ಈ ಪ್ರತಿಕ್ರಿಯೆ ನೀಡಿದ್ದಾರೆ.

ಸೈನಿಕರು ಮತ್ತು ಶಸ್ತ್ರಸಜ್ಜಿತ ವಾಹನಗಳನ್ನು ಚೀನಾವುಗಡಿಯಿಂದ2.5 ಕಿ.ಮೀ.ಹಿಂದಕ್ಕೆಕರೆಸಿಕೊಂಡಿದೆ. ಗಸ್ತು ಠಾಣೆ 14, 15 ಮತ್ತು 17ಎ ಬಳಿಯಲ್ಲಿ ಈ ಯೋಧರು ಬೀಡುಬಿಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.