ಭಾನುವಾರ, 12 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವ್ಯಾಸಂಗಕ್ಕಾಗಿ ಹೋದ ವಿದ್ಯಾರ್ಥಿಗಳ ವಿಚಾರಣೆ: ಅಮೆರಿಕ ನಿಲುವಿಗೆ ಚೀನಾ ಪ್ರತಿಭಟನೆ

Published 30 ಜನವರಿ 2024, 14:38 IST
Last Updated 30 ಜನವರಿ 2024, 14:38 IST
ಅಕ್ಷರ ಗಾತ್ರ

ಬೀಜಿಂಗ್‌: ವ್ಯಾಸಂಗಕ್ಕಾಗಿ ತೆರಳುತ್ತಿರುವ ವಿದ್ಯಾರ್ಥಿಗಳನ್ನು ಅಮೆರಿಕ ನಡೆಸಿಕೊಳ್ಳುತ್ತಿರುವ ರೀತಿಗೆ ಚೀನಾ ಪ್ರತಿಭಟನೆ ವ್ಯಕ್ತಪಡಿಸಿದೆ.

‘ಅಮೆರಿಕಕ್ಕೆ ತೆರಳುವ ವಿದ್ಯಾರ್ಥಿಗಳನ್ನು ಹಲವು ಗಂಟೆಗಳ ಕಾಲ ವಿಚಾರಣೆಗೊಳಪಡಿಸಲಾಗುತ್ತಿದೆ ಮತ್ತು ಅವರ ಎಲೆಕ್ಟ್ರಾನಿಕ್ ಸಾಧನಗಳನ್ನು ಪರಿಶೀಲಿಸಲಾಗುತ್ತಿದೆ. ಜತೆಗೆ, ಕೆಲವರನ್ನು ಬಲವಂತವಾಗಿ ಗಡೀಪಾರು ಮಾಡಲಾಗುತ್ತಿದೆ’ ಎಂದು ಅಮೆರಿಕದಲ್ಲಿರುವ ಚೀನಾ ರಾಯಭಾರಿ ಷಿ ಫೆಂಗ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ವೀಸಾ ಇದ್ದರೂ ಅನೇಕ ವಿದ್ಯಾರ್ಥಿಗಳಿಗೆ ಕೆಲವು ತಿಂಗಳಿನಿಂದ ದೇಶದ ಒಳಗೆ ಪ್ರವೇಶಿಸಲು ಅವಕಾಶ ನೀಡುತ್ತಿಲ್ಲ’ ಎಂದು ತಿಳಿಸಿದ್ದಾರೆ.

‘ಚೀನಾ ವಿದ್ಯಾರ್ಥಿಗಳು ಇಲ್ಲಿನ ವಿಮಾನ ನಿಲ್ದಾಣಗಳಿಗೆ ಬಂದಿಳಿದಾಗ ಅಧಿಕಾರಿಗಳು ಅವರನ್ನು ಎಂಟು ಗಂಟೆಗಳ ಕಾಲ ಸುದೀರ್ಘ ವಿಚಾರಣೆ ನಡೆಸುತ್ತಿದ್ದಾರೆ ಮತ್ತು ತಮ್ಮ ಪೋಷಕರನ್ನು ಸಂಪರ್ಕಿಸಲೂ ಅವಕಾಶ ನೀಡುತ್ತಿಲ್ಲ.  ಅವರ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡಿ ಅವರನ್ನು ಸ್ವದೇಶಕ್ಕೆ ವಾಪಸ್‌ ಕಳುಹಿಸಿ, ಅವರ ಪ್ರವೇಶವನ್ನು ನಿಷೇಧಿಸಲಾಗುತ್ತಿದೆ. ಖಂಡಿವಾಗಿಯೂ ಇದು ಸ್ವೀಕಾರ್ಹ ನಡೆಯಲ್ಲ’ ಎಂದು  ವಿದ್ಯಾರ್ಥಿ ವಿನಿಮಯ ಕಾರ್ಯಕ್ರಮದಲ್ಲಿ ಫೆಂಗ್‌ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಅಮೆರಿಕದಲ್ಲಿ 2.90 ಲಕ್ಷ ಚೀನಾ ವಿದ್ಯಾರ್ಥಿಗಳಿದ್ದಾರೆ. ಇವರ ಸಂಖ್ಯೆ ವಿದೇಶಿ ವಿದ್ಯಾರ್ಥಿಗಳ ಪೈಕಿ ಮೂರನೇ ಒಂದು ಭಾಗದಷ್ಟಿದೆ. ಚೀನಾದ 13 ಲಕ್ಷ ವಿದ್ಯಾರ್ಥಿಗಳು ವಿವಿಧ ದೇಶಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ’ ಎಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT