ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಡಿ ವಿಚಾರದಲ್ಲಿ ಕ್ಯಾತೆ ತೆಗೆದ ಚೀನಾ: ಅರುಣಾಚಲ ಪ್ರದೇಶ ಸೇರಿಸಿ ನಕ್ಷೆ ಬಿಡುಗಡೆ

Published 29 ಆಗಸ್ಟ್ 2023, 5:16 IST
Last Updated 29 ಆಗಸ್ಟ್ 2023, 5:16 IST
ಅಕ್ಷರ ಗಾತ್ರ

ನವದೆಹಲಿ: ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ಕ್ಯಾತೆ ತೆಗೆದಿರುವ ಚೀನಾ, ವಿವಾದಾತ್ಮಕ ಪ್ರದೇಶವಾದ ಅರುಣಾಚಲ ಪ್ರದೇಶ ಹಾಗೂ ಅಕ್ಸಾಯ್‌ ಚಿನ್ ಪ್ರದೇಶ ತನ್ನ ಭೂಭಾಗ ಎಂದು ಹೇಳಿಕೊಂಡಿದೆ.

ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ ನಿರ್ದೇಶನದಂತೆ ನೈಸರ್ಗಿಕ ಸಂಪನ್ಮೂಲ ಸಚಿವಾಲಯವು 2023ರ ಆವೃತ್ತಿಯ ಅಧಿಕೃತ ನಕ್ಷೆಯನ್ನು ಬಿಡುಗಡೆ ಮಾಡಿದೆ.

ಹೊಸ ನಕ್ಷೆಯಲ್ಲಿ ಅರುಣಾಚಲ ಪ್ರದೇಶ, ಅಕ್ಸಾಯ್‌ ಚಿನ್, ತೈವಾನ್ ಮತ್ತು ವಿವಾದಿತ ದಕ್ಷಿಣ ಚೀನಾ ಪ್ರದೇಶ ಒಳಗೊಂಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಲಡಾಖ್‌ನ ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಚೀನಾ ಯೋಧರ ನಡುವೆ ಸಂಘರ್ಷ ನಡೆದ ನಂತರ ಉಭಯ ರಾಷ್ಟ್ರಗಳ ನಡುವಿನ ಸಂಬಂಧ ಸಂಪೂರ್ಣ ಹದೆಗೆಟ್ಟಿದೆ. ಇದನ್ನು ಸರಿಪಡಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ ಅವರು ದಕ್ಷಿಣ ಆಫ್ರಿಕಾದ ಜೊಹಾನೆಸ್‌ಬರ್ಗ್‌ನಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಮಾತುಕತೆ ನಡೆಸಿದ್ದರು. ಗಡಿಯಲ್ಲಿ ಉದ್ವಿಗ್ನತೆ ಶಮನ ಮತ್ತು ಸೇನಾಪಡೆಗಳನ್ನು ಹಿಂಪಡೆಯಲು ಒಪ್ಪಿಗೆ ಸೂಚಿಸಿದ್ದರು.

ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಇದೀಗ ಚೀನಾ ಸರ್ಕಾರ ಭಾರತದ ಭೂ ಪ್ರದೇಶಗಳನ್ನು ಸೇರಿಸಿ ನಕ್ಷೆ ಬಿಡುಗಡೆ ಮಾಡುವ ಮೂಲಕ ಮತ್ತೆ ಭಾರತದ ಕೆಂಗಣ್ಣಿಗೆ ಗುರಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT