ಬೀಜಿಂಗ್: ದಿನದಿಂದ ದಿನಕ್ಕೆ ಭೀತಿ ಹೆಚ್ಚಿಸುತ್ತಿರುವ ಕೊರೊನಾ ವೈರಸ್ ಸೋಂಕಿನಿಂದಾಗಿ ಚೀನಾದಲ್ಲಿ ಮೃತಪಟ್ಟವರ ಸಂಖ್ಯೆ ಜಾಸ್ತಿಯಾಗುತ್ತಲೇ ಇದೆ. ಇದುವರೆಗೂ ಮೃತಪಟ್ಟವರ ಸಂಖ್ಯೆಯು 2,345ಕ್ಕೆ ಏರಿಕೆಯಾಗಿದೆ.

ಹೊಸದಾಗಿ 397 ಕೊರೊನಾ ವೈರಸ್ ಸೋಂಕು ಪೀಡಿತ ಪ್ರಕರಣಗಳು ಪತ್ತೆಯಾಗಿದ್ದು, ಇದುವರೆಗೂ 76,288 ಜನರಿಗೆ ಸೋಂಕು ತಗುಲಿದೆ. ಚೀನಾದ ಹುಬೆ ಪ್ರಾಂತ್ಯದಲ್ಲಿ ಸಾವಿಗೀಡಾದವರ ಸಂಖ್ಯೆ ಹೆಚ್ಚಿದೆ ಎಂದು ರಾಷ್ಟ್ರೀಯ ಆರೋಗ್ಯ ಆಯೋಗ ಶನಿವಾರ ತಿಳಿಸಿದೆ.

ಕೊರೊನಾ ವೈರಸ್ ಕೇಂದ್ರಬಿಂದುವಾಗಿರುವ ಹುಬೆ ಪ್ರಾಂತ್ಯದಲ್ಲಿ ಹೊಸದಾಗಿ 109 ಸಾವುಗಳು ಸಂಭವಿಸಿದ್ದು, ವುಹಾನ್ನಲ್ಲಿ 90 ಜನರು ಮೃತಪಟ್ಟಿದ್ದಾರೆ. ಈ ಮೂಲಕ ಇದುವರೆಗೂ ಮೃತಪಟ್ಟವರ ಸಂಖ್ಯೆ 2,345ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ:ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ಮದುವೆ ಮುಂದೂಡಿದ್ದ ವೈದ್ಯ, ಅದೇ ವೈರಸ್ಗೆ ಬಲಿ

ಲೆಬನಾನ್ ಮತ್ತು ಇಸ್ರೇಲ್ನಲ್ಲಿ ಶುಕ್ರವಾರ ಮೊದಲ ಪ್ರಕರಣಗಳು ದೃಢಪಟ್ಟಿವೆ. ಸೋಂಕು ಪೀಡಿತ 13 ಹೊಸ ಪ್ರಕರಣಗಳ ಪೈಕಿ ಎರಡು ಸಾವುಗಳು ಸಂಭವಿಸಿವೆ ಎಂದು ಇರಾನ್ ಆರೋಗ್ಯ ಸಚಿವಾಲಯ ತಿಳಿಸಿದೆ. ಇದರೊಂದಿಗೆ ಇರಾನ್ನಲ್ಲಿ ಇದುವರೆಗೂ 18 ಸೋಂಕು ಪೀಡಿತ ಪ್ರಕರಣಗಳ ಪೈಕಿ 4 ಜನರು ಮೃತಪಟ್ಟಿದ್ದಾರೆ.

ಇಟಲಿಯಲ್ಲೂ ಕೂಡ ಕೊರೊನಾ ವೈರಸ್ ಸೋಂಕಿಗೆ ಮೊದಲ ಸಾವು ವರದಿಯಾಗಿದ್ದು, ಅಧಿಕಾರಿಗಳು 10 ಉತ್ತರದ ಪಟ್ಟಣಗಳಲ್ಲಿನ ಶಾಲೆಗಳು, ಬಾರ್ಗಳು ಮತ್ತು ಇತರ ಸಾರ್ವಜನಿಕ ಸ್ಥಳಗಳನ್ನು ಮುಚ್ಚಲು ಆದೇಶಿಸಿದ್ದಾರೆ.

ಕಳೆದ ವರ್ಷದ ಡಿಸೆಂಬರ್ನಲ್ಲಿ ಕೊರೊನಾ ವೈರಸ್ ಸೋಂಕು ಮೊದಲಿಗೆ ಚೀನಾದ ವುಹಾನ್ನಲ್ಲಿ ಕಾಣಿಸಿಕೊಂಡಿತು. ಬಳಿಕ ಪ್ರಪಂಚದ ಇತರೆ 20ಕ್ಕೂ ಅಧಿಕ ರಾಷ್ಟ್ರಗಳಿಗೆ ಸೋಂಕು ವ್ಯಾಪಿಸಿದೆ. ಚೀನಾದಾದ್ಯಂತ ಸೋಂಕು ಹರಡುವಿಕೆಯನ್ನು ತಪ್ಪಿಸಲು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪ್ರಯಾಣವನ್ನು ನಿರ್ಬಂಧಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.