ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಲಂಕಾ ‍ಪ್ರಧಾನಿ ಮುಂದಿನ ವಾರ ಚೀನಾಕ್ಕೆ

ಚೀನಾ ವಿದೇಶಾಂಗ ಸಚಿವಾಲಯ ಈ ವಿಷಯವನ್ನು ಖಚಿತಪಡಿಸಿದೆ.
Published 22 ಮಾರ್ಚ್ 2024, 7:43 IST
Last Updated 22 ಮಾರ್ಚ್ 2024, 7:43 IST
ಅಕ್ಷರ ಗಾತ್ರ

ಬಿಜೀಂಗ್: ಮುಂದಿನ ವಾರ ಶ್ರೀಲಂಕಾದ ಪ್ರಧಾನಿ ದಿನೇಶ್ ಗುಣವರ್ಧನಾ ಅವರು ಚೀನಾ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಚೀನಾ ವಿದೇಶಾಂಗ ಸಚಿವಾಲಯ ಈ ವಿಷಯವನ್ನು ಖಚಿತಪಡಿಸಿದೆ.

ಮಾರ್ಚ್ 25 ರಿಂದ 30ರ ಮಧ್ಯೆ ದಿನೇಶ್ ಅವರು ಚೀನಾ ಪ್ರವಾಸ ಕೈಗೊಳ್ಳಲಿದ್ದಾರೆ. ಚೀನಾ ಸ್ಟೇಟ್ ಕೌನ್ಸಿಲ್‌ ಆಹ್ವಾನದ ಮೇರೆಗೆ ದಿನೇಶ್ ಗುಣವರ್ಧನಾ ಅವರು ಚೀನಾಕ್ಕೆ ಭೇಟಿ ನೀಡುತ್ತಿದ್ದಾರೆ ಎಂದು ಅಲ್ಲಿನ ವಿದೇಶಾಂಗ ಇಲಾಖೆಯ ವಕ್ತಾರ ಲಿನ್ ಜಿಯಾನ್ ತಿಳಿಸಿದ್ದಾರೆ.

ಚೀನಾ ದೇಶವು ಶ್ರೀಲಂಕಾಕ್ಕೆ ಸಾಲ ನೀಡುವಲ್ಲಿ ಮುಂಚೂಣಿಯಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT