ಬೀಜಿಂಗ್: ಚೀನಾದ ಅತಿದೊಡ್ಡ ನಗರ ಶಾಂಘೈನಲ್ಲಿ ಬುಧವಾರ ಒಂದೇ ದಿನ 25,146 ಲಕ್ಷಣ ರಹಿತ ಕೋವಿಡ್ ಹೊಸ ಪ್ರಕರಣಗಳು ವರದಿಯಾಗಿವೆ.

ರೋಗ ಲಕ್ಷಣವಿರುವ ಪ್ರಕರಣಗಳಲ್ಲೂ ಏರಿಕೆ ಕಂಡುಬಂದಿದೆ. 24 ಗಂಟೆ ಅವಧಿಯಲ್ಲಿ 2,573 ರೋಗ ಲಕ್ಷಣವಿರುವ ಪ್ರಕರಣಗಳು ಪತ್ತೆಯಾಗಿವೆ ಎಂದು ಸ್ಥಳೀಯ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಚೀನಾದ ಇತರೆ ಪ್ರದೇಶಗಳಿಗೆ ಹೋಲಿಕೆ ಮಾಡಿದರೆ ವಾಣಿಜ್ಯ ನಗರಿ ಶಾಂಘೈನಲ್ಲಿ ಲಕ್ಷಣ ರಹಿತ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರಿಂದ ಸೋಂಕಿತರು, ಸೌಮ್ಯ ಲಕ್ಷಣ ಮತ್ತು ಲಕ್ಷಣ ರಹಿತ ಪ್ರಕರಣಗಳ ಮಾಹಿತಿ ಅಸ್ಪಷ್ಟವಾಗಿದೆ ಎಂದು ವರದಿಯಾಗಿವೆ.

ಕೋವಿಡ್ ಹರಡುವಿಕೆಯನ್ನು ನಿಯಂತ್ರಿಸಲು ಶಾಂಘೈನಲ್ಲಿ ವಿಧಿಸಲಾಗಿರುವ ಲಾಕ್‌ಡೌನ್ ಮೂರನೇ ವಾರಕ್ಕೆ ಕಾಲಿಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.