ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಭಾರತದಲ್ಲಿ ನಡೆಯುವ ಜಿ–20 ಸಭೆಯಲ್ಲಿ ವಿದೇಶಾಂಗ ಸಚಿವ ಭಾಗಿ: ಚೀನಾ

Last Updated 28 ಫೆಬ್ರುವರಿ 2023, 11:13 IST
ಅಕ್ಷರ ಗಾತ್ರ

ಬೀಜಿಂಗ್: ಭಾರತದಲ್ಲಿ ಮಾರ್ಚ್‌ 2ರಂದು ನಡೆಯಲಿರುವ ಜಿ–20 ರಾಷ್ಟ್ರಗಳ ವಿದೇಶಾಂಗ ಸಚಿವರ ಸಭೆಯಲ್ಲಿ ಸಚಿವ ಕಿನ್ ಗಾಂಗ್‌ ‍ಪಾಲ್ಗೊಳ್ಳುವರು ಎಂದು ಚೀನಾ ವಿದೇಶಾಂಗ ಸಚಿವಾಲಯ ಮಂಗಳವಾರ ತಿಳಿಸಿದೆ.

‘ದೇಶಗಳ ನಡುವಿನ ದ್ವಿಪಕ್ಷೀಯ ಬಾಂಧವ್ಯ ವೃದ್ಧಿ, ಆಹಾರ ಮತ್ತು ಇಂಧನ ಕ್ಷೇತ್ರಗಳಲ್ಲಿ ಭದ್ರತೆ ಹಾಗೂ ಅಭಿವೃದ್ಧಿಯಲ್ಲಿ ಸಹಕಾರವನ್ನು ಖಾತ್ರಿಪಡಿಸಲು ಚೀನಾ ಇತರ ದೇಶಗಳೊಂದಿಗೆ ಕಾರ್ಯ ನಿರ್ವಹಿಸಲು ಸಿದ್ಧ ಎಂಬ ಸಂದೇಶ ರವಾನಿಸಲು ಈ ಭೇಟಿ ನೆರವಾಗಲಿದೆ’ ಎಂದು ಸಚಿವಾಲಯ ಹೇಳಿದೆ.

‘ಅಂತರರಾಷ್ಟ್ರೀಯ ಸಹಕಾರಕ್ಕಾಗಿ ರಚಿಸಲಾಗಿರುವ ವೇದಿಕೆಯೇ ಜಿ–20. ಜಾಗತಿಕ ಆರ್ಥಿಕತೆ ಹಾಗೂ ಅಭಿವೃದ್ಧಿಗೆ ಎದುರಾಗಿರುವ ಸವಾಲುಗಳ ಬಗ್ಗೆ ಜಿ–20 ವಿದೇಶಾಂಗ ಸಚಿವರ ಸಭೆ ಚರ್ಚಿಸಲಿದೆ. ವಿಶ್ವದ ಆರ್ಥಿಕತೆಯ ಪುನಶ್ಚೇತನಕ್ಕೆ ಸಂಬಂಧಿಸಿ ಈ ಗುಂಪು ಮಹತ್ವದ ಪಾತ್ರ ವಹಿಸಲಿದೆ’ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಮಾವೊ ನಿಂಗ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT