ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನೇಪಾಳ- ಭಾರತ ಸಂಬಂಧ ವೃದ್ಧಿಯಾಗುವ ವಿಶ್ವಾಸ: PM ಪ್ರಚಂಡ

Published 10 ಜೂನ್ 2024, 4:58 IST
Last Updated 10 ಜೂನ್ 2024, 4:58 IST
ಅಕ್ಷರ ಗಾತ್ರ

ನವದೆಹಲಿ: ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಸಮಾರಂಭದಲ್ಲಿ ಪಾಲ್ಗೊಂಡ ನೇಪಾಳ ಪ್ರಧಾನಿ ಪುಷ್ಪ ಕಮಲ್‌ ದಹಲ್‌ ಪ್ರಚಂಡ ಅವರು ‘ನೇಪಾಳ ಮತ್ತು ಭಾರತದ ನಡುವಿನ ಸಂಬಂಧ ಮತ್ತಷ್ಟು ವೃದ್ಧಿಯಾಗಲಿದೆ ಎನ್ನುವ ವಿಶ್ವಾಸವಿದೆ’ ಎಂದು ಹೇಳಿದ್ದಾರೆ. 

ಭಾನುವಾರ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಿ ಅಭಿನಂದಿಸಿದ ಬಳಿಕ ಅವರು ಕೆಲ ಸಮಯ ಮಾತುಕತೆ ನಡೆಸಿದರು. 

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ‘ನೇಪಾಳ-ಭಾರತ ಸಂಬಂಧಗಳನ್ನು ಮತ್ತಷ್ಟು ಹೆಚ್ಚಿಸುವ ಮಾರ್ಗಗಳ ಕುರಿತು ನಾವು ಚರ್ಚಿಸಿದ್ದೇವೆ. ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಭಾರತದೊಂದಿಗಿನ ನಮ್ಮ ಬಹುಮುಖಿ ಸಂಬಂಧಗಳು ಏಳಿಗೆಯಾಗುತ್ತವೆ ಎಂಬ ವಿಶ್ವಾಸ ನನಗಿದೆ’ ಎಂದು ಬರೆದುಕೊಂಡಿದ್ದಾರೆ. 

ಪ್ರಧಾನಿ ಪ್ರಮಾಣ ವಚನ ಸಮಾರಂಭದಲ್ಲಿ ಮಾಲ್ದೀವ್ಸ್‌ ಅಧ್ಯಕ್ಷ ಮೊಹಮ್ಮದ್‌ ಮುಯಿಜು, ಬಾಂಗ್ಲಾ ಪ್ರಧಾನಿ ಶೇಖ್‌ ಹಸಿನಾ, ಬಾಲಿವುಡ್‌ ತಾರೆಯರು, ಉದ್ಯಮಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT