ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 World Update: 9.83 ಕೋಟಿಗೂ ಅಧಿಕ ಸೋಂಕಿತರು

Last Updated 22 ಜನವರಿ 2021, 16:58 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಪ್ರಪಂಚದಾದ್ಯಂತ ಇದುವರೆಗೆ ಒಟ್ಟು 9.83ಕೋಟಿ ಜನರಿಗೆ ಕೋವಿಡ್‌–19 ಸೋಂಕು ತಗುಲಿದೆ. ಇದರಲ್ಲಿ 7 ಕೋಟಿಗೂ ಅಧಿಕ ಸೋಂಕಿತರು ಗುಣಮುಖರಾಗಿದ್ದು, 21.06ಲಕ್ಷ ಮಂದಿ ಮೃತಪಟ್ಟಿದ್ದಾರೆ ಎಂದು ವರ್ಲ್ಡೊ ಮೀಟರ್ ವೆಬ್‌ಸೈಟ್‌ ವರದಿ ಮಾಡಿದೆ.

ವಿಶ್ವದಾದ್ಯಂತ ಇಂದು ಹೊಸದಾಗಿ 280,542 ಪ್ರಕರಣಗಳು ಬೆಳಕಿಗೆ ಬಂದಿದ್ದು, 7,966 ಜನರು ಮೃತಪಟ್ಟಿದ್ದಾರೆ. ಇದೇ ವೇಳೆ 7,06,79,995 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಒಟ್ಟಾರೆ 2.55 ಕೋಟಿಗೂ ಅಧಿಕ ಸಕ್ರಿಯ ಪ್ರಕರಣಗಳಿದ್ದು, ಇದರಲ್ಲಿ 1,11,319 ಜನರ ಸ್ಥಿತಿ ಗಂಭೀರವಾಗಿದೆ.

ಅತಿಹೆಚ್ಚು ಸೋಂಕಿತರನ್ನು ಹೊಂದಿರುವ ಅಮೆರಿಕದಲ್ಲಿ ಇಂದು 28,544 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 632 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಈ ದೇಶದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 4,20,917ಕ್ಕೆ ಏರಿಕೆಯಾಗಿದೆ. ಅಮೆರಿಕದ ನಂತರದ ಸ್ಥಾನದಲ್ಲಿರುವ ಭಾರತದಲ್ಲಿ ಒಂದು ಕೋಟಿಗೂ ಅಧಿಕ ಪ್ರಕರಣಗಳು ವರದಿಯಾಗಿವೆ.

ಉಳಿದಂತೆ ಸೋಂಕು ಪ್ರಕರಣಗಳ ಸಂಖ್ಯೆ ಬ್ರೆಜಿಲ್‌ನಲ್ಲಿ 86.99ಲಕ್ಷ, ಫ್ರಾನ್ಸ್‌ನಲ್ಲಿ 29.87ಲಕ್ಷ, ರಷ್ಯಾದಲ್ಲಿ 36.77ಲಕ್ಷ, ಸ್ಪೇನ್‌ನಲ್ಲಿ 25.60ಲಕ್ಷಕ್ಕೆ ಏರಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT