ವಾಷಿಂಗ್ಟನ್: ಪ್ರಪಂಚದಾದ್ಯಂತ ಇದುವರೆಗೆ ಒಟ್ಟು 10.51 ಕೋಟಿ ಜನರಿಗೆ ಕೋವಿಡ್–19 ಸೋಂಕು ತಗುಲಿದೆ. ಇದರಲ್ಲಿ 7.68 ಕೋಟಿ ಸೋಂಕಿತರು ಗುಣಮುಖರಾಗಿದ್ದು, 22.83 ಲಕ್ಷ ಮಂದಿ ಮೃತಪಟ್ಟಿದ್ದಾರೆ ಎಂದು ವರ್ಲ್ಡೊ ಮೀಟರ್ ವೆಬ್ಸೈಟ್ ವರದಿ ಮಾಡಿದೆ.
ವಿಶ್ವದಾದ್ಯಂತ ಇಂದು ಹೊಸದಾಗಿ 2,15,122 ಪ್ರಕರಣಗಳು ಬೆಳಕಿಗೆ ಬಂದಿದ್ದು, 6,603 ಜನರು ಮೃತಪಟ್ಟಿದ್ದಾರೆ. ಇದೇ ವೇಳೆ 7,68,26,118 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಒಟ್ಟಾರೆ 2.58 ಕೋಟಿಗೂ ಅಧಿಕ ಸಕ್ರಿಯ ಪ್ರಕರಣಗಳಿದ್ದು, ಇದರಲ್ಲಿ 1,06,282 ಜನರ ಸ್ಥಿತಿ ಗಂಭೀರವಾಗಿದೆ.
ಅತಿಹೆಚ್ಚು ಸೋಂಕಿತರನ್ನು ಹೊಂದಿರುವ ಅಮೆರಿಕದಲ್ಲಿ ಇಂದು 11,470 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 300 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಈ ದೇಶದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 4,62,236ಕ್ಕೆ ಏರಿಕೆಯಾಗಿದೆ. ಅಮೆರಿಕದ ನಂತರದ ಸ್ಥಾನದಲ್ಲಿರುವ ಭಾರತದಲ್ಲಿ 1 ಕೋಟಿಗೂ ಅಧಿಕ ಪ್ರಕರಣಗಳು ವರದಿಯಾಗಿವೆ.