ವಾಷಿಂಗ್ಟನ್: ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಕೊರೊನಾ ವೈರಸ್ ರಿಸೋರ್ಸ್ ಸೆಂಟರ್ ಮಾಹಿತಿ ಪ್ರಕಾರ, ಜಗತ್ತಿನಾದ್ಯಂತ 1,33,82,020ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 5,80,038 ಮಂದಿ ಮೃತಪಟ್ಟಿದ್ದಾರೆ. ಈ ವರೆಗೆ 74,45,299 ಸೋಂಕಿತರು ಗುಣಮುಖರಾಗಿದ್ದಾರೆ.
ಜಗತ್ತಿನಲ್ಲಿ ಅತಿಹೆಚ್ಚು ಪ್ರಕರಣಗಳನ್ನು ಹೊಂದಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಅಮೆರಿಕವೊಂದರಲ್ಲೇ 3,43,4636 ಸೋಂಕಿತರಿದ್ದು, ಈ ವರೆಗೆ 1,36,699ಮಂದಿ ಸಾವಿಗೀಡಾಗಿದ್ದಾರೆ.
ಅಮೆರಿಕ ನಂತರ ಅತಿಹೆಚ್ಚು ಪ್ರಕರಣಗಳು ವರದಿಯಾದ ರಾಷ್ಟ್ರಗಳ ಸಾಲಿನಲ್ಲಿ ಬ್ರೆಜಿಲ್ ಇದ್ದು, ಈ ದೇಶದಲ್ಲಿ 19,26,824ಪ್ರಕರಣಗಳು ಬೆಳಕಿಗೆ ಬಂದಿವೆ. .