ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನ: ಲಕ್ಷದ ಗಡಿ ಸಮೀಪಿಸಿದ ಕೋವಿಡ್‌–19 ಪೀಡಿತರ ಸಂಖ್ಯೆ

Last Updated 7 ಜೂನ್ 2020, 11:00 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ಪಾಕಿಸ್ತಾನದಲ್ಲಿ ಕೋವಿಡ್‌–19 ಸೋಂಕು ಪೀಡಿತರ ಸಂಖ್ಯೆ ಲಕ್ಷದ ಗಡಿ ತಲುಪುತ್ತಿದ್ದು, ಇದುವರೆಗೆ 2 ಸಾವಿರಕ್ಕೂ ಅಧಿಕ ಜನರು ಸತ್ತಿದ್ದಾರೆ.

ಈ ಮಧ್ಯೆ, ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್‌ ಅವರು, ಸೋಂಕು ಹರಡುವುದನ್ನು ತಡೆಯಲು ಕಟ್ಟುನಿಟ್ಟಾಗಿ ಲಾಕ್‌ಡೌನ್‌ ಜಾರಿಗೊಳಿಸುವುದನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.

‘ಕಟ್ಟುನಿಟ್ಟಿನ ಲಾಕ್‌ಡೌನ್‌ ಘೋಷಣೆಯು ಆರ್ಥಿಕ ವ್ಯವಸ್ಥೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ ಅಲ್ಲದೆ, ಬಡತನ ಪ್ರಮಾಣವೂ ಹೆಚ್ಚಲಿದೆ’ ಎಂದು ಅವರು ಪ್ರತಿಪಾದಿಸಿದ್ದಾರೆ.

ಭಾನುವಾರ ಬೆಳಿಗ್ಗೆಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಹೊಸದಾಗಿ 4,960 ಸೋಂಕುಪ್ರಕರಣಗಳು ಪತ್ತೆಯಾಗಿವೆ. ಸೋಂಕು ಪೀಡಿತರ ಸಂಖ್ಯೆ 98,943ಕ್ಕೆ ಏರಿದೆ.

ಇದೇ ಅವಧಿಯಲ್ಲಿ 67 ಜನರು ಸತ್ತಿದ್ದು, ಮೃತರ ಒಟ್ಟು ಸಂಖ್ಯೆಯೂ 2,002ಕ್ಕೆ ಏರಿದೆ ಎಂದು ರಾಷ್ಟ್ರೀಯ ಆರೋಗ್ಯ ಸೇವಾ ಸಚಿವಾಲಯದ ಹೇಳಿಕೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT