ಬರ್ಲಿನ್: ದೇಶದಲ್ಲಿ ದಿನೇದಿನೇ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಜನರು ದೊಡ್ಡ ದೊಡ್ಡ ಕಾರ್ಯಕ್ರಮ ಅಥವಾ ಬೃಹತ್ ಪ್ರಮಾಣದಲ್ಲಿ ಜನರು ಒಗ್ಗೂಡುವಂಥ ಸಮಾರಂಭಗಳನ್ನು ರದ್ದುಪಡಿಸಬೇಕೆಂದು ಜರ್ಮನಿಯ ರೋಗ ನಿಯಂತ್ರಣ ಕೇಂದ್ರವು ಕರೆ ನೀಡಿದೆ.

ದೇಶದಲ್ಲಿ ಇದೇ ಮೊದಲ ಬಾರಿಗೆ ಗುರುವಾರ ದಾಖಲೆಯ ಮಟ್ಟದಲ್ಲಿ ಅಂದರೆ ದೈನಂದಿನ ಪ್ರಕರಣಗಳ ಸಂಖ್ಯೆ 50 ಸಾವಿರಕ್ಕೆ ತಲುಪಿದ್ದು, ಹೊಸದಾಗಿ 48,640 ಪ್ರಕರಣಗಳು ವರದಿಯಾಗಿವೆ. ಅಲ್ಲದೇ, ಪ್ರತಿ ಲಕ್ಷ ಜನಸಂಖ್ಯೆಗೆ ಸೋಂಕಿನ ಪ್ರಮಾಣವು 249.1ರಿಂದ 263.7ಕ್ಕೆ ಏರಿದೆ ಎಂದು ಅಲ್ಲಿನ ರಾಬರ್ಟ್ ಕೋಚ್ ಇನ್‌ಸ್ಟಿಟ್ಯೂಟ್ ಶುಕ್ರವಾರ ತಿಳಿಸಿದೆ.

‘ಸಾಧ್ಯವಾದರೆ ದೊಡ್ಡ ಸಮಾರಂಭಗಳನ್ನು ರದ್ದುಗೊಳಿಸಬೇಕು. ಅಂತೆಯೇ ಅಗತ್ಯವಿಲ್ಲದ ಕಡೆ ಜನರು ದೈಹಿಕ ಅಂತರ ಕಾಪಾಡಿಕೊಳ್ಳುವುದು ಅತ್ಯಗತ್ಯ’ ಎಂದು ಇನ್‌ಸ್ಟಿಟ್ಯೂಟ್ ತುರ್ತು ಕರೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.