ಸಿಂಗಪುರ: ಕೊರೊನಾ ಪ್ರಸರಣವನ್ನು ತಡೆಯಲು ಹೇರಲಾಗಿರುವ ಸಾರ್ವಜನಿಕ ಆರೋಗ್ಯ ಕ್ರಮಗಳ ಹಿನ್ನೆಲೆಯಲ್ಲಿ ಸಿಂಗಪುರವು ಸೋಮವಾರ ತನ್ನ 56ನೇ ಸ್ವಾತಂತ್ರ್ಯ ದಿನವನ್ನು ಸರಳವಾಗಿ ಆಚರಿಸಿತು.

ಆದರೆ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಗಸ್ಟ್ 21 ರಂದು ಪೂರ್ಣ ಪ್ರಮಾಣದ ಮೆರವಣಿಗೆ ಮತ್ತು ಇತರೆ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಮರೀನಾ ಬೇ ಫ್ಲೋಟಿಂಗ್ ಪ್ಲಾಟ್ಫಾರ್ಮ್ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಚಿವರು, ಸಂಸತ್ತಿನ ಸದಸ್ಯರು, ಮುಂಚೂಣಿ ಕಾರ್ಯಕರ್ತರು ಸೇರಿದಂತೆ 100 ಪ್ರೇಕ್ಷಕರು ಭಾಗವಹಿಸಿದ್ದರು.

ಈ ವೇಳೆ ಸಿಂಗಪುರ ಸಶಸ್ತ್ರ ಪಡೆಗಳು(ಎಸ್ಎಎಫ್) ಪರೇಡ್ ನಡೆಸಿದ್ದು, ಇದರಲ್ಲಿ ಕೇವಲ 600 ಮಂದಿ ಭಾಗವಹಿಸಿದ್ದರು. ಇದು ಕಳೆದ ವರ್ಷ ಮೆರವಣಿಗೆಯಲ್ಲಿ ಭಾಗವಹಿಸಿದ ಸಿಬ್ಬಂದಿಯ ಮೂರನೇ ಒಂದು ಭಾಗಕ್ಕಿಂತ ಕಡಿಮೆಯಾಗಿದೆ. ಈ ಸ್ವಾತಂತ್ರ್ಯ ದಿನಾಚರಣೆ ವೇಳೆ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು.

‘ಕೋವಿಡ್ ಸುರಕ್ಷತಾ ದೃಷ್ಟಿಯಿಂದ ಪ್ರೇಕ್ಷಕರು ಮತ್ತು ಪರೇಡ್ನಲ್ಲಿ ಭಾಗವಹಿಸುವ ಸಿಬ್ಬಂದಿಯ ಸಂಖ್ಯೆಯನ್ನು ಕಡಿಮೆಗೊಳಿಸಲಾಗಿದೆ’ ಎಂದು ನ್ಯೂಸ್ ಏಷ್ಯಾ ವರದಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.