ಇಸ್ಲಾಮಾಬಾದ್: ಕೋವಿಡ್ ಹೊಸ ಅಲೆ ವಿರುದ್ಧದ ಹೋರಾಟಕ್ಕೆ ಅಣಿಯಾಗುತ್ತಿರುವ ಪಾಕಿಸ್ತಾನ ಸರ್ಕಾರ, ದೇಶದಲ್ಲಿನ 80 ವರ್ಷ ಮತ್ತು ಅದಕ್ಕಿಂತ ಮೇಲ್ಬಟ್ಟ ವಯಸ್ಸಿನ ನಾಗರಿಕರಿಗೆ ಅವರ ಮನೆಗಳಲ್ಲೇ ಕೋವಿಡ್ ಲಸಿಕೆ ನೀಡುವುದಾಗಿ ಪ್ರಕಟಿಸಿದೆ.

ಈ ಕುರಿತು ಸೋಮವಾರ ಮಾಹಿತಿ ನೀಡಿದ ಯೋಜನೆ ಮತ್ತು ಅಭಿವೃದ್ಧಿ ಸಚಿವ ಅಸಾದ್ ಉಮರ್ ‘ಬೇಸಿಗೆಯಲ್ಲಿ ಹಿರಿಯ ನಾಗರಿಕರು ಲಸಿಕಾ ಕೇಂದ್ರಗಳನ್ನು ತಲುಪುವುದು ಕಷ್ಟ. ಜತೆಗೆ ಲಸಿಕೆ ಹಾಕಿಸಿಕೊಳ್ಳಲು ಸರದಿಯಲ್ಲಿ ನಿಂತು ಕಾಯಬೇಕು. ಹಿರಿಯ ನಾಗರಿಕರು ಎದುರಿಸುವ ಇಂಥ ಹಲವು ತೊಂದರೆಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ‘ ಎಂದು ಅವರು ಹೇಳಿದರು.

ಕಳೆದ ಇಪ್ಪತ್ನಾಲ್ಕು ಗಂಟೆಗಳಲ್ಲಿ ಕೋವಿಡ್‌ನಿಂದಾಗಿ 103 ಮಂದಿ ಸಾವನ್ನಪ್ಪಿದ್ದು, 3953 ಹೊಸ ಕೊರೊನಾ ಸೋಂಕಿನ ಪ್ರಕರಣಗಳು ವರದಿಯಾಗಿವೆ ಎಂದು ರಾಷ್ಟ್ರೀಯ ಆರೋಗ್ಯ ಸೇವೆಗಳ ಸಚಿವಾಲಯ ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.