ಮಾಸ್ಕೋ: ದಕ್ಷಿಣ ಆಫ್ರಿಕಾ ಹಾಗೂ ಬ್ರಿಟನ್ ನಂತರ ರಷ್ಯಾದಲ್ಲಿಯೂ ಕೊರೊನಾ ವೈರಸ್ ಸೋಂಕು ತೀವ್ರಗತಿಯಲ್ಲಿ ಹೆಚ್ಚುತ್ತಿರುವುದು ಕಂಡುಬಂದಿದೆ.

ಕಳೆದ 24 ಗಂಟೆಗಳಲ್ಲಿ ರಷ್ಯಾದಾದ್ಯಂತ 29,350 ಹೊಸ ಪ್ರಕರಣಗಳು ಬೆಳಕಿಗೆ ಬಂದಿದ್ದು, 493 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಅಲ್ಲಿನ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಈ ವರೆಗೆ ಒಟ್ಟು 28,77,727 ಕೋವಿಡ್ ಪ್ರಕರಣಗಳು ರಷ್ಯಾದಲ್ಲಿ ದಾಖಲಾಗಿದ್ದು, 51, 351 ಸೋಂಕಿತರು ಸಾವಿಗೀಡಾಗಿದ್ದಾರೆ. ಅತಿ ಹೆಚ್ಚು ಕೊರೊನಾ ಪ್ರಕರಣಗಳನ್ನು ಹೊಂದಿರುವ ರಾಷ್ಟ್ರಗಳಲ್ಲಿ ರಷ್ಯಾ ನಾಲ್ಕನೇ ಸ್ಥಾನದಲ್ಲಿದೆ.

ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ 7,797 ಹೊಸ ಪ್ರಕರಣಗಳು ದಾಖಲಾಗಿವೆ. ಎರಡನೇ ದೊಡ್ಡ ನಗರವಾದ ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿ ಒಂದೇ ದಿನಕ್ಕೆ 3,752 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಈಗಾಗಲೇ ದಕ್ಷಿಣ ಆಫ್ರಿಕಾ ಹಾಗೂ ಬ್ರಿಟನ್‌ನಲ್ಲಿ ಕೊರೊನಾ ವೈರಸ್‌ನ ಹೊಸ ಪ್ರಬೇಧ ಪತ್ತೆಯಾಗಿದ್ದು, ಸೋಂಕು ಹರಡುವಿಕೆಯ ಎರಡನೇ ಅಲೆಗೆ ಕಾರಣವಾಗಿದೆ ಎಂದು ಅಲ್ಲಿನ ಸರ್ಕಾರಗಳು ಹೇಳಿವೆ.

ಇದೀಗ ರಷ್ಯಾದಲ್ಲಿ ಕೊರೊನಾ ಸೋಂಕು ಪ್ರಕರಣಗಳಲ್ಲಿ ಹಠಾತ್ತಾಗಿ ಏರಿಕೆ ಕಂಡುಬಂದಿರುವುದು ಹಲವು ಸಂಶಯಗಳನ್ನು ಹುಟ್ಟುಹಾಕಿದೆ. ಇದು ಕೊರೊನಾ ವೈರಸ್‌ನ ಹೊಸ ಪ್ರಬೇಧ ಇರಬಹುದಾ ಎಂಬ ಪ್ರಶ್ನೆ ಮುನ್ನೆಲೆಗೆ ಬಂದಿದೆ.

ಸರ್ಕಾರದ ಅಂಕಿ-ಅಂಶಗಳಿಗಿಂತ ಅಧಿಕ ಕೊರೊನಾ ಸೋಂಕು ಪ್ರಕರಣಗಳು ರಷ್ಯಾದಲ್ಲಿ ಇರಬಹುದು ಎಂದು ಕೆಲ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ವಿಚಾರವೀಗ ಅಲ್ಲಿನ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ.

ಇದನ್ನೂ ಓದಿ...

ದಕ್ಷಿಣ ಆಫ್ರಿಕಾದಲ್ಲಿ ಕೊರೊನಾ ವೈರಸ್‌ನ ಹೊಸ ಪ್ರಬೇಧ ಪತ್ತೆ, ಸೋಂಕು ಹೆಚ್ಚಳ

ಬ್ರಿಟನ್‌ನಲ್ಲಿ ಹೊಸ ಸ್ವರೂಪದ ಕೊರೊನಾವೈರಸ್ ಪತ್ತೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.