ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಇರಾನ್‌ | ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ: ಸಾವಿನ ಸಂಖ್ಯೆ 38ಕ್ಕೆ ಏರಿಕೆ

Published : 23 ಸೆಪ್ಟೆಂಬರ್ 2024, 13:16 IST
Last Updated : 23 ಸೆಪ್ಟೆಂಬರ್ 2024, 13:16 IST
ಫಾಲೋ ಮಾಡಿ
Comments

ಟೆಹರಾನ್: ಪೂರ್ವ ಇರಾನ್‌ನ ಕಲ್ಲಿದ್ದಲು ಗಣಿಯೊಂದರಲ್ಲಿ ಶನಿವಾರ ರಾತ್ರಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟಿರುವ ಮತ್ತಷ್ಟು ಮಂದಿ ಕಾರ್ಮಿಕರ ಶವಗಳನ್ನು ರಕ್ಷಣಾ ತಂಡದವರು ಸೋಮವಾರ ವಶಪಡಿಸಿಕೊಂಡಿದ್ದು, ಮೃತರ ಸಂಖ್ಯೆ 38ಕ್ಕೆ ಏರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟೆಹರಾನ್‌ನಿಂದ 540 ಕಿ.ಮೀ. ದೂರದಲ್ಲಿರುವ ತಬಾಸ್‌ ಕಲ್ಲಿದ್ದಲು ಗಣಿಯಲ್ಲಿ ಮಿಥೇನ್ ಅನಿಲ ಸೋರಿಕೆಯಿಂದ ಈ ಸ್ಫೋಟ ಸಂಭವಿಸಿದ್ದು, ಇನ್ನೂ 14 ಜನ ಗಣಿ ಕಾರ್ಮಿಕರು ನೆಲದಡಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT