ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರಾಚಿಯಲ್ಲಿ ಗ್ಯಾಸ್ ಪೈಪ್‌ಲೈನ್ ಸ್ಫೋಟ: ಮೃತರ ಸಂಖ್ಯೆ 17ಕ್ಕೆ ಏರಿಕೆ

Last Updated 19 ಡಿಸೆಂಬರ್ 2021, 10:44 IST
ಅಕ್ಷರ ಗಾತ್ರ

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.

'ಖಾಸಗಿ ಬ್ಯಾಂಕ್‌ವೊಂದರ ಅಡಿಯಲ್ಲಿ ಒಳಚರಂಡಿ ಮೂಲಕ ಹಾದುಹೋಗಿದ್ದ ಗ್ಯಾಸ್ ಪೈಪ್‌ಲೈನ್‌ ಸ್ಫೋಟದಿಂದ ಅವಘಡ ಸಂಭವಿಸಿದೆ. ಘಟನೆಯಲ್ಲಿ 16 ಜನರು ಮೃತಪಟ್ಟಿದ್ದರು ಮತ್ತು 15 ಜನರು ಗಾಯಗೊಂಡಿದ್ದರು. ಚರಂಡಿಯ ಮೇಲೆ ಕಟ್ಟಡವನ್ನು ನಿರ್ಮಿಸಲಾಗಿತ್ತು' ಎಂದು ಕರಾಚಿ ಪೊಲೀಸ್ ವಕ್ತಾರ ತಿಳಿಸಿದ್ದಾರೆ.

ಈ ಸ್ಫೋಟಕ್ಕೂ, ಭಯೋತ್ಪಾದನೆಗೂ ಯಾವುದೇ ಸಂಬಂಧವಿದ್ದಂತೆ ಕಾಣಿಸುತ್ತಿಲ್ಲ ಎಂದವರು ತಿಳಿಸಿದ್ದಾರೆ.

ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಭಾನುವಾರ ಮುಂಜಾನೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ಮೃತರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ.

ಸ್ಫೋಟದಲ್ಲಿ ಆಡಳಿತ ಪಕ್ಷವಾದ ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ ಪಕ್ಷದ (ಪಿಟಿಐ) ಶಾಸಕ ಅಲಂಗಿರ್ ಖಾನ್ ಅವರ ತಂದೆಯು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಈ ಕುರಿತು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಟ್ವೀಟ್ ಮಾಡಿದ್ದು, 'ಕರಾಚಿಯ ಶೇರ್ ಶಾ ಪರಾಚ ಚೌಕದಲ್ಲಿ ನಡೆದ ಅವಳಿ ಸ್ಫೋಟದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನನ್ನ ಸಂತಾಪಗಳು. ಶಾಸಕ ಅಲಂಗಿರ್ ಖಾನ್ ಅವರ ತಂದೆಯು ಸ್ಫೋಟದಲ್ಲಿ ಸಾವಿಗೀಡಾಗಿರುವುದನ್ನು ಕೇಳಲು ದುಃಖವಾಗುತ್ತಿದೆ. ಈ ದುಃಖ ಭರಿಸುವ ಶಕ್ತಿಯನ್ನು ಅಲ್ಲಾ ಅವರಿಗೆ ನೀಡಲಿ' ಎಂದಿದ್ದಾರೆ.

'ಸಿಂಧ್ ಮುಖ್ಯಮಂತ್ರಿ ಮುರದ್ ಅಲಿ ಶಾ ಈ ಕುರಿತಂತೆ ತನಿಖೆ ನಡೆಸಿ, ವರದಿ ಸಲ್ಲಿಸುವಂತೆ ಕರಾಚಿಯ ಕಮಿಷನರ್ ಅವರಿಗೆ ಸೂಚಿಸಿದ್ದು, ಪೊಲೀಸ್ ಅಧಿಕಾರಿಗಳು ಸ್ಫೋಟದ ಕುರಿತಾಗಿ ಎಲ್ಲ ಆಯಾಮಗಳಲ್ಲಿಯೂ ತನಿಖೆ ಕೈಗೊಳ್ಳಬೇಕು ಎಂದಿದ್ದಾರೆ' ಎಂದು ಮುಖ್ಯಮಂತ್ರಿಗಳ ವಕ್ತಾರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT